ಕರ್ನಾಟಕ

karnataka

ETV Bharat / state

ಸುತ್ತೂರು ಮಠಕ್ಕೆ ಭೇಟಿ ನೀಡಿದ ಆಸ್ಟ್ರೇಲಿಯಾದ ಸಂಸದೀಯ ನಿಯೋಗ

ಆಸ್ಟ್ರೇಲಿಯಾದ ಸಂಸದೀಯ ನಿಯೋಗ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಿ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಸಮಾಲೋಚನೆ ನಡೆಸಿದರು.

australian-parliamentary-delegation-visited-suttur-mutt-in-mysuru
ಸುತ್ತೂರು ಮಠಕ್ಕೆ ಭೇಟಿ ನೀಡಿದ ಆಸ್ಟ್ರೇಲಿಯಾದ ಸಂಸದೀಯ ನಿಯೋಗ

By

Published : Jun 2, 2023, 10:21 PM IST

ಮೈಸೂರು:ಭಾರತದಲ್ಲಿ ವಿವಿಧ ಕ್ಷೇತ್ರಗಳ ಅಧ್ಯಯನ ನಡೆಸಲು ಆಗಮಿಸಿರುವ ಆಸ್ಟ್ರೇಲಿಯಾದ ಸಂಸದೀಯ ನಿಯೋಗವು, ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಿ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಸಮಾಲೋಚನೆ ನಡೆಸಿದರು. ಅಸೆಂಬ್ಲಿಯ ಸಭಾಧ್ಯಕ್ಷರಾದ ಮಿಚೆಲ್ ರಾಬರ್ಟ್ಸ್‌ ಅವರ ಅಧ್ಯಕ್ಷತೆಯಲ್ಲಿ ವಿರೋಧ ಪಕ್ಷದ ನಾಯಕರಾದ ಡಾ. ಡೇವಿಡ್ ಹನಿ, ಶಾಸಕರಾದ ಡಾ. ಜಗದೀಶ್ ಕೃಷ್ಣನ್, ಕ್ಯಾಸಂಡ್ರ ರೋ, ಶ್ರೀ ಡೇವಿಡ್ ಸ್ಕರೈ ಅವರ ತಂಡದೊಂದಿಗೆ ಆಗಮಿಸಿದ್ದರು.

ಜೆಎಸ್‌ಎಸ್ ಸಂಸ್ಥೆಗಳು ಆಸ್ಟ್ರೇಲಿಯಾದ ವಿವಿಧ ವಿಶ್ವವಿದ್ಯಾನಿಲಯಗಳೊಂದಿಗೆ ಹೊಂದಿರುವ ಪರಸ್ಪರ ಒಡಂಬಡಿಕೆಗಳ ವಿವರಗಳನ್ನು ಅವರ ಗಮನಕ್ಕೆ ತರಲಾಯಿತು. ಅದಕ್ಕಾಗಿ ಆಸ್ಟ್ರೇಲಿಯಾದ ಸಂಸದೀಯ ನಿಯೋಗ ಸಂತೋಷ ವ್ಯಕ್ತಪಡಿಸಿತು. ಜೆಎಸ್‌ಎಸ್ ಸಂಸ್ಥೆಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಬೋಧಕರು ಅಲ್ಲಿಯ ವಿವಿಧ ವಿಶ್ವವಿದ್ಯಾನಿಲಯಗಳೊಂದಿಗೆ ಶೈಕ್ಷಣಿಕ ವಿನಿಮಯಗಳ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು, ಭಾರತ ಮತ್ತು ಆಸ್ಟ್ರೇಲಿಯಾಗಳ ನಡುವಿನ ಸಂಬಂಧ ಮತ್ತಷ್ಟು ವೃದ್ಧಿಯಾಗಲು ಪ್ರಯತ್ನಿಸುವುದಾಗಿ ತಿಳಿಸಿದರು.

ಸುತ್ತೂರು ಮಠಕ್ಕೆ ಭೇಟಿ ನೀಡಿದ ಆಸ್ಟ್ರೇಲಿಯಾದ ಲೆಜಿಸ್ಲೇಟಿವ್ ಅಸೆಂಬ್ಲಿಯ ಸಭಾಧ್ಯಕ್ಷರಾದ ಮಿಚೆಲ್ ರಾಬರ್ಟ್ಸ್ ಹಾಗೂ ತಂಡದವರನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಅಭಿನಂದಿಸಿ, ಸನ್ಮಾನಿಸಿದರು. ಈ ವೇಳೆ ಡಾ. ಸಿ.ಜಿ. ಬೆಟಸೂರಮಠ, ಡಾ. ಸುರೀಂದರ್ ಸಿಂಗ್, ಕೆಎಸ್‌ಒಯು ಕುಲಪತಿ ಪ್ರೊ. ಶರಣಪ್ಪ ಹಲಸೆ, ಪಶ್ಚಿಮ ಬಂಗಾಳದ ಐಎಎಸ್ ಅಧಿಕಾರಿ ಕೆಂಪಹೊನ್ನಯ್ಯ, ಕುಲಸಚಿವ ಡಾ. ಬಿ. ಮಂಜುನಾಥ್, ಪ್ರಾಂಶುಪಾಲರಾದ ಡಾ. ಹೆಚ್. ಬಸವನಗೌಡಪ್ಪ ಹಾಗೂ ವಿವಿಧ ನಿಕಾಯಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಇದನ್ನೂ ಓದಿ:ಶಿವಮೂರ್ತಿ ಶರಣರ ವಿರುದ್ಧದ ಸಾಕ್ಷಿಗಳ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಶೀಘ್ರ ಪ್ರಾರಂಭ:ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗುತ್ತಿದೆ. ಈ ಸಂಬಂಧ ಭಾರತದಲ್ಲಿ ಆಸ್ಟ್ರೇಲಿಯಾದ ಕಾನ್ಸಲ್‌ ಜನರಲ್‌ ಬ್ಯಾರಿ ಓ ಫ್ಯಾರೆಲ್‌ ಅವರು ನಿನ್ನೆ (ಗುರುವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ, ಶಿಕ್ಷಣ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಿರ್ಧರಿಸಲಾಯಿತು. ದೇಶದಲ್ಲಿ ಅತ್ಯಂತ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ತಂತ್ರಜ್ಞಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿಯೂ ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯಾದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೊಂದಲು ರಾಜ್ಯ ಉತ್ಸುಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು.

ಈ ವೇಳೆ ದಕ್ಷಿಣ ಭಾರತದ ಆಸ್ಟ್ರೇಲಿಯನ್ ಕಾನ್ಸಲ್ ಜನರಲ್ ಸಾರಾ ಕಿರ್ಲೆವ್, ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಆಸ್ಟ್ರೇಲಿಯನ್ ಕಾನ್ಸುಲೆಟ್ ಜನರಲ್​ನ ನಿಯೋಜಿತ ಡೆಪ್ಯುಟಿ ಕಾನ್ಸಲ್ ಜನರಲ್ ಹ್ಯುಂಗ್ - ಮಿನ್ ಕಿಮ್, ರಾಜ್ಯದ ಐಟಿ, ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಧಾರ್ಮಿಕ ಆಚರಣೆಗೆ ಅನುಯಾಯಿಗಳ ಮಧ್ಯೆ ಮೂಡದ ಒಮ್ಮತ: ನ್ಯಾಯಾಲಯದಿಂದ ಆದೇಶ ತರುವಂತೆ ಎಸಿ ಸೂಚನೆ

ABOUT THE AUTHOR

...view details