ಮೈಸೂರು: ಹುಣಸೂರು ತಾಲೂಕಿನ ಚಿಕ್ಕ ಹುಣಸೂರು ಬಳಿ ಇರುವ ಸಿ.ಟಿ. ಆರ್.ಐ ಆವರಣದಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದ ವ್ಯಕ್ತಿವೋರ್ವ ತನ್ನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಹುಣಸೂರು ಬಳಿ ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆಗೆ ಶರಣು - ಅಯ್ಯಪ್ಪ ಮಾಲೆ ಧರಿಸಿದ ವ್ಯಕ್ತಿಯೊಬ್ಬ ತನ್ನ ಟವೆಲ್ ನಿಂದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಚಿಕ್ಕ ಹುಣಸೂರು ಬಳಿ ಇರುವ ಸಿ.ಟಿ.ಆರ್.ಐ ಆವರಣದಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದ ವ್ಯಕ್ತಿಯೊಬ್ಬ ತನ್ನ ಟವೆಲ್ ನಿಂದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಅಯ್ಯಪ್ಪ ಮಾಲಾಧಾರಿ....
ಹೀಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶ್ರೀನಾಥ್ (45) ಎಂದು ಗುರುತಿಸಲಾಗಿದೆ. ಈತ ಮೈಸೂರು ನಗರದ ಸರಸ್ವತಿಪುರಂ ನಿವಾಸಿ ಎಂದು ತಿಳಿದುಬಂದಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಈತ ಅಯ್ಯಪ್ಪ ಮಾಲೆ ಧರಿಸಿದ್ದ.
ಈತನ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.