ಕರ್ನಾಟಕ

karnataka

ETV Bharat / state

ಕಾನೂನು ಬಾಹಿರ ಸಂಘಟನೆಗಳನ್ನು ಬ್ಯಾನ್ ಮಾಡಬೇಕು: ಶ್ರೀರಾಮುಲು ಒತ್ತಾಯ - Minister Sriramulu news

ರಾಜ್ಯದಲ್ಲಿ ಇತ್ತೀಚಿಗೆ ಪಿ.ಎಫ್.ಐ ಸಂಘಟನೆ ಹಾಗೂ ಎಸ್.ಡಿ.ಪಿ.ಐ ಪಕ್ಷಗಳು ಸಮಾಜ ವಿರೋಧಿ ಕೆಲಸ ಮಾಡುತ್ತಿವೆ ಅವುಗಳನ್ನು ಬ್ಯಾನ್ ಮಾಡಬೇಕು ಎಂದು ಶ್ರೀರಾಮುಲು ಆಗ್ರಹಿಸಿದರು.

Minister Sriramulu
ಕಾನೂನು ಬಾಹಿರ ಸಂಘಟನೆಗಳನ್ನು ಬ್ಯಾನ್ ಮಾಡಬೇಕು: ಸಚಿವ ಶ್ರೀರಾಮುಲು

By

Published : Jan 23, 2020, 5:35 PM IST

ಮೈಸೂರು:ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

ಹೆಚ್‌.ಡಿ.ಕೋಟೆಯಲ್ಲಿ ನೂತನ ಸರ್ಕಾರಿ ಆಸ್ಪತ್ರೆಯನ್ನು ಉದ್ಘಾಟನೆ ಮಾಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ರಾಮುಲು ರಾಜ್ಯದಲ್ಲಿ ಖಾಲಿ ಇರುವ ಎಲ್ಲ ಸರ್ಕಾರಿ ಆಸ್ಪತ್ರೆಗೆ ಡಾಕ್ಟರ್ ಹಾಗೂ ನರ್ಸ್​ಗಳನ್ನು ಇನ್ನೂ 4 ತಿಂಗಳಲ್ಲಿ ಭರ್ತಿ ಮಾಡುತ್ತೇನೆ.

ಕಾನೂನು ಬಾಹಿರ ಸಂಘಟನೆಗಳನ್ನು ಬ್ಯಾನ್ ಮಾಡಬೇಕು: ಸಚಿವ ಶ್ರೀರಾಮುಲು
‌ಗ್ರಾಮೀಣ ಪ್ರದೇಶಗಳಿಗೆ ವೈದ್ಯರು ಹೋಗಿ ಕೆಲಸ ಮಾಡಬೇಕು ಎಂಬ ಕಾನೂನು ಇದೆ. ಆದರೆ ಅದನ್ನು ಯಾರು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಈ ಬಗ್ಗೆ ಯಾವುದೇ ಹೊಂದಾಣಿಕೆ ಇಲ್ಲ, ಕಡ್ಡಾಯವಾಗಿ ವೈದ್ಯರು ಗ್ರಾಮೀಣ ಪ್ರದೇಶದಲ್ಲಿ ಸೇವೆ ಮಾಡಲೇಬೇಕು ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಪಕ್ಷ ಸತ್ತು ಹೋಗುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು, ಕಾಂಗ್ರೆಸ್ ಪಕ್ಷ ಈಗಾಗಲೇ ಸತ್ತು ಹೋಗಿರುವ ಪಕ್ಷವಾಗಿದ್ದು, ಈ ಬಗ್ಗೆ ಅವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ಇತ್ತೀಚಿಗೆ ಪಿ.ಎಫ್.ಐ ಸಂಘಟನೆ ಹಾಗೂ ಎಸ್.ಡಿ.ಪಿ.ಐ ಪಕ್ಷಗಳು ಸಮಾಜ ವಿರೋಧಿ ಕೆಲಸ ಮಾಡುತ್ತಿವೆ ಅವುಗಳನ್ನು ಬ್ಯಾನ್ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಶ್ರೀರಾಮುಲು ಆಗ್ರಹಿಸಿದರು.

ABOUT THE AUTHOR

...view details