ಮೈಸೂರು: ನಿರಾಶ್ರಿತರ ಕೇಂದ್ರಗಳಿಗೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಭೇಟಿ ನೀಡಿ, ಅವರಿಗೆ ಅಗತ್ಯ ವಸ್ತುಗಳನ್ನು ವಿತರಿಸಿ ಸಾಂತ್ವನ ಹೇಳಿದ್ರು.
ನೆರೆ ಸಂತ್ರಸ್ತರಿಗೆ ಸಹಾಯಹಸ್ತ ಚಾಚಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್
ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ನಂಜನಗೂಡಿನ ಕಪಿಲಾ ನದಿ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿ, ಅಗತ್ಯ ವಸ್ತುಗಳನ್ನು ವಿತರಿಸಿದರು.
ಹಿರಿಯ ನಟಿ ಭಾರತಿ ವಿಷ್ಣುವರ್ಧನ್
ಮಂಗಳವಾರ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ನಂಜನಗೂಡಿನ ಕಪಿಲಾ ನದಿಯ ಪ್ರವಾಹಕ್ಕೆ ಸಿಲುಕಿ, ಮನೆ ಕಳೆದುಕೊಂಡ ಸಂತ್ರಸ್ತರಿಗೆ ಅಗತ್ಯ ವಸ್ತುಗಳಾದ ಸ್ವೆಟರ್, ಬಿಸ್ಕೆಟ್ ಹಾಗೂ ಬಟ್ಟೆಗಳನ್ನು ನಿರಾಶ್ರಿತರ ಶಿಬಿರದಲ್ಲಿ ವಿತರಿಸಿದರು. ನಂತರ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಳಿಯ ಅನಿರುದ್ಧ್ ಅವರು ಭಾರತಿ ಅವರಿಗೆ ಸಾಥ್ ನೀಡಿದರು.