ಕರ್ನಾಟಕ

karnataka

ETV Bharat / state

ನಗರಸಭೆ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಅಭ್ಯರ್ಥಿ ಸಾವು - ಹುಣಸೂರು ತಾಲೂಕಿನ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ

ಹುಣಸೂರು ಪಟ್ಟಣದ ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಬೈಕ್​ನಿಂದ ಬಿದ್ದು ಸಾವನ್ನಪ್ಪಿದ್ದಾರೆ.

Hunsur
ಹುಣಸೂರು ನಗರಸಭೆ ಚುನಾವಣಾ ಫಲಿತಾಂಶಕ್ಕೂ ಮುನ್ನ ಅಭ್ಯರ್ಥಿ ಸಾವು..

By

Published : Feb 10, 2020, 11:05 PM IST

ಮೈಸೂರು:ಹುಣಸೂರು ಪಟ್ಟಣದ ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಬೈಕ್​ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.

ಚಿಕ್ಕಣ್ಣ (54) ಮೃತ ವ್ಯಕ್ತಿ. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಹುಣಸೂರು ತಾಲೂಕಿನ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ನಾಳೆಯೇ ಈ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಆದರೆ ಇಂದು ಸಂಜೆ ತನ್ನ ಬೈಕ್​ನಲ್ಲಿ ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಹುಣಸೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details