ಮೈಸೂರು:ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಂಜನಗೂಡು- ಗುಂಡ್ಲುಪೇಟೆ ಹೆದ್ದಾರಿಯ ಸಿಂಧುವಳ್ಳಿ ಪುರ ಬಳಿ ನಡೆದಿದೆ.
ಬೈಕ್-ಕಾರಿನ ಮಧ್ಯೆ ಡಿಕ್ಕಿ: ಇಬ್ಬರು ಸಾವು - ಗುಂಡ್ಲುಪೇಟೆಯ ಹೌಸಿಂಗ್ ಬೋರ್ಡ್ ಕಾಲೋನಿ
ನಂಜನಗೂಡು- ಗುಂಡ್ಲುಪೇಟೆ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ನ ನಡುವೆ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ.
ಬೈಕ್ ಸವಾರರಿಬ್ಬರ ಸಾವು
ಕಿರಣ್ ಕುಮಾರ್ ಹಾಗೂ ಪ್ರತಾಪ್ ಮೃತ ದುರ್ದೈವಿಗಳು, ಇವರು ಗುಂಡ್ಲುಪೇಟೆಯ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳೆಂದು ಗುರುತಿಸಲಾಗಿದೆ. ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ಹೆದ್ದಾರಿಯಲ್ಲಿ ಬರುವಾಗ, ಗುಂಡ್ಲುಪೇಟೆಯಿಂದ ವೇಗವಾಗಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಬೈಕ್ ಪುಡಿ ಪುಡಿಯಾಗಿದೆ. ಇನ್ನು ಯುವಕರು ಹೆಲ್ಮೆಟ್ ಧರಿಸಿರಲಿಲ್ಲ ಎನ್ನಲಾಗಿದ್ದು, ಡಿಕ್ಕಿಯ ರಭಸಕ್ಕೆ ಯುವಕರಿಬ್ಬರ ತಲೆ ಛಿದ್ರವಾಗಿದೆ.
ಈ ಸಂಬಂಧ ನಂಜನಗೂಡು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಚಾಲಕ ಕಾರ್ ಬಿಟ್ಟು ಪರಾರಿಯಾಗಿದ್ದಾನೆ.