ಮೈಸೂರು: ಕಾರು ಹಾಗೂ ಬೈಕ್ ಡಿಕ್ಕಿ ಹೊಡೆದು, ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹೆಗ್ಗೋಠರು ಗ್ರಾಮದ ಮಹೇಶ್ (50)ಹಾಗೂ ಮಹದೇವಪ್ಪ(55) ಮೃತ ದುರ್ದೈವಿಗಳಾಗಿದ್ದಾರೆ.
ನಂಜನಗೂಡಿನಲ್ಲಿ ಗಾರೆ ಕೆಲಸ ಮುಗಿಸಿಕೊಂಡು ಹೋಗುವಾಗ ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ನಂಜನಗೂಡಿನ ಗೋಳೂರು ಗ್ರಾಮದ ವಿದ್ಯಾಪೀಠದ ಬಳಿ ಎದುರುಗಡೆಯಿಂದ ಬಂದ ಕಾರಿನ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಕೆಳಗಡೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.