ಮೈಸೂರು: ಆರ್.ಆರ್.ನಗರ, ಶಿರಾ ಉಪಚುನಾವಣೆ ಹಾಗೂ ಬಿಹಾರದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿ, ಗೆಲುವಿನತ್ತ ಹೆಜ್ಜೆ ಹಾಕುತ್ತಿರುವುದಕ್ಕೆ ನಗರದಲ್ಲಿನ ಬಿಜೆಪಿ ಪಕ್ಷದ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ: ಕಾರ್ಯಕರ್ತರಿಂದ ಸಂಭ್ರಮಾಚರಣೆ - ಆರ್ ಆರ್ ನಗರ ಉಪಚುನಾವಣೆ
ರಾಜ್ಯದಲ್ಲಿ ನಡೆದ ಆರ್ ಆರ್ ನಗರ ಹಾಗೂ ಶಿರಾ ಉಪಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು, ಎರಡೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿರುವ ಹಿನ್ನೆಲೆ, ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಚಾಮರಾಜಪುರಂ ಮೊಹಲ್ಲಾದಲ್ಲಿರುವ ಬಿಜೆಪಿ ಕಚೇರಿ ಮುಂದೆ ಜಮಾಯಿಸಿದ ಕಾರ್ಯಕರ್ತರು, ಉಪಚುನಾವಣೆ ಕ್ಷೇತ್ರಗಳಾದ ಆರ್.ಆರ್.ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಹಾಗೂ ಶಿರಾದಲ್ಲಿ ಡಾ.ರಾಜೇಶ್ ಗೌಡ ಮುನ್ನಡೆ ಸಾಧಿಸಿ, ಗೆಲುವಿನತ್ತ ದಾಪುಗಾಲಿಡುತ್ತಿರುವುದಕ್ಕೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರಣ ಎಂದು ನಾಯಕರಿಗೆ ಜೈಕಾರ ಹಾಕಿದರು. ಇನ್ನು ಪರಸ್ಪರ ಸಿಹಿ ವಿತರಿಸಿ, ಗೆಲುವು ನಮ್ಮದೇ ಎಂದು ಸಂತಸಪಟ್ಟರು.