ಮೈಸೂರು:ಹುಣಸೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅನರ್ಹ ಶಾಸಕ ಹೆಚ್.ವಿಶ್ವನಾಥ್ ನಾಮಪತ್ರ ಸಲ್ಲಿಸಿದ್ದಾರೆ. ಅವರು ತಮ್ಮ ಅಫಿಡವಿಟ್ನಲ್ಲಿ 3.49 ಕೋಟಿ ರೂ. ಆದಾಯ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಹುಣಸೂರಿನ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಆಸ್ತಿ ಎಷ್ಟಿದೆ ಗೊತ್ತಾ? - ಹುಣಸೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ
ಹುಣಸೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅನರ್ಹ ಶಾಸಕ ಹೆಚ್.ವಿಶ್ವನಾಥ್ ನಾಮಪತ್ರ ಸಲ್ಲಿಸಿದ್ದಾರೆ. ಅವರು ತಮ್ಮ ಅಫಿಡವಿಟ್ನಲ್ಲಿ 3.49 ಕೋಟಿ ರೂ. ಆದಾಯ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಹುಣಸೂರಿನ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್
15 ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, ನಿನ್ನೆ ಹುಣಸೂರು ಉಪ ಚುನಾವಣೆಗೆ ಬಿಜೆಪಿಯಿಂದ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ ವೇಳೆ 3.49 ಕೋಟಿ ರೂ. ಆದಾಯವನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ.
ಒಟ್ಟು ಆಸ್ತಿಯಲ್ಲಿ 2.80 ಕೋಟಿ ಸ್ಥಿರಾಸ್ತಿ, 7.05 ಲಕ್ಷ ರೂಪಾಯಿ ಚರಾಸ್ತಿ ಹೊಂದಿದ್ದಾರೆ. ಇನ್ನು ಪತ್ನಿ ಶಾಂತಮ್ಮ ಹೆಸರಿನಲ್ಲಿ 17.67 ಲಕ್ಷ ಚರಾಸ್ತಿ, 42 ಲಕ್ಷ ಸ್ಥಿರಾಸ್ತಿ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ. ಅಲ್ಲದೇ ಯಾವುದೇ ಸಾಲ ಇಲ್ಲ ಎಂದು ನಾಮಪತ್ರ ಸಲ್ಲಿಕೆಯ ಅಫಿಡವಿಟ್ನಲ್ಲಿ ತಿಳಿಸಿದ್ದಾರೆ.