ಮೈಸೂರು: 17 ಜನರ ತ್ಯಾಗದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ , ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾರೆ , ಈಶ್ವರಪ್ಪ ಮಂತ್ರಿಗಳಾಗಿದ್ದಾರೆ ಎಂದು ಈಶ್ವರಪ್ಪ ಹೇಳಿಕೆಗೆ ಸಚಿವ ಬಿ.ಸಿ.ಪಾಟೀಲ್ ಟಾಂಗ್ ನೀಡಿದ್ದಾರೆ.
ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಚಿವ ಬಿ.ಸಿ. ಪಾಟೀಲ್ ಮಾಧ್ಯಮಗಳ ಜೊತೆ ಮಾತನಾಡಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಹಾಗೂ ರಾಜ್ಯಾಧ್ಯಕ್ಷರು ಹೇಳುತ್ತಿದ್ದು, ಇನ್ನೆರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿದರು. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದ್ರು.
ನಾಳೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುತ್ತಿದ್ದು, ರಾಜ್ಯದ ಸ್ಥಿತಿಗತಿ ,ಪಕ್ಷ ಸಂಘಟನೆ, ಹಾಗೂ ಆಡಳಿತದ ಗೊಂದಲಗಳನ್ನು ಚರ್ಚೆ ಮಾಡಿ ಗೊಂದಲ ಬಗೆಹರಿಸುತ್ತಾರೆ ಇದ್ದನ್ನು ಬಹಿರಂಗವಾಗಿ ಚರ್ಚೆ ಮಾಡುವುದಕ್ಕಿಂತ ಆಂತರಿಕವಾಗಿ ಚರ್ಚೆ ಮಾಡಿ ಬಗೆಹರಿಸುವುದು ಉತ್ತಮ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದರು.