ಕರ್ನಾಟಕ

karnataka

ETV Bharat / state

ಬಿರುಗಾಳಿ, ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಬಿಜೆಪಿ ಶಾಸಕ ಭೇಟಿ: ಪರಿಹಾರ ಭರವಸೆ - ಭಾರಿ ಬಿರುಗಾಳಿ ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕರ ಭೇಟಿ. .

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಸುತ್ತಮುತ್ತ ಭಾನುವಾರ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ಸಾಕಷ್ಟು ಹಾನಿ ಉಂಟಾಗಿದೆ. ಬಿಜೆಪಿ ಶಾಸಕ ಹರ್ಷವರ್ಧನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಪರಿಹಾರದ ಭರವಸೆ ನೀಡಿದರು.

ಹಾನಿಗೊಳಗಾಗಿದ್ದ ಪ್ರದೇಶಗಳಿಗೆ ನಂಜನಗೂಡು ಬಿಜೆಪಿ ಶಾಸಕ ಹರ್ಷವರ್ಧನ್  ಭೇಟಿ

By

Published : May 27, 2019, 5:10 PM IST


ಮೈಸೂರು: ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಹಾನಿಗೊಳಗಾಗಿದ್ದ ಪ್ರದೇಶಗಳಿಗೆ ನಂಜನಗೂಡು ಬಿಜೆಪಿ ಶಾಸಕ ಹರ್ಷವರ್ಧನ್ ಭೇಟಿ ನೀಡಿ ಪರಿಶೀಲಿಸಿದರು.

ಹಾನಿಗೊಳಗಾಗಿದ್ದ ಪ್ರದೇಶಗಳಿಗೆ ನಂಜನಗೂಡು ಬಿಜೆಪಿ ಶಾಸಕ ಹರ್ಷವರ್ಧನ್ ಭೇಟಿ

ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಸುತ್ತಮುತ್ತ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ಹಲವಾರು ಮನೆಗಳ ಮೇಲ್ಛಾವಣಿ ಕುಸಿದು 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಮರಗಳು ರಸ್ತೆಯಲ್ಲಿ ಮುರಿದು ಬಿದ್ದಿವೆ. ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಹರ್ಷವರ್ಧನ್ ಭೇಟಿ ನೀಡಿ ಸ್ಥಳಗಳನ್ನ ಪರಿಶೀಲಿಸಿದರು. ಬಳಿಕ ಪರಿಹಾರ ನೀಡುವ ಭರವಸೆ ನೀಡಿದರು.

ಬಿಜೆಪಿ ಶಾಸಕ ಹರ್ಷವರ್ಧನ್ ಅವರಿಗೆ ತಾಲೂಕಿನ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.

For All Latest Updates

TAGGED:

ABOUT THE AUTHOR

...view details