ಮೈಸೂರು:ನಾವು ಆಪರೇಷನ್ ಕಮಲ ಮಾಡುವುದಿಲ್ಲ, ಆದರೆ ಬಿಜೆಪಿ ಬಾಗಿಲು ಸದಾ ತೆರೆದಿದೆ. ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ಮತ್ತೆ ಆಪರೇಷನ್ ಕಮಲ ನಡೆಯುವ ಬಗ್ಗೆ ನಳೀನ್ ಕುಮಾರ್ ಹೇಳಿದ್ದೇನು? - Nalin Kumar Kateel latest news
ನಾವು ಆಪರೇಷನ್ ಕಮಲ ಮಾಡುವುದಿಲ್ಲ. ಆದರೆ ಬಿಜೆಪಿ ಬಾಗಿಲು ತೆರೆಯುತ್ತಿದೆ. ಮುಂದಿನ ದಿನಗಳಲ್ಲಿ ಏನೆಲ್ಲಾ ರಾಜಕೀಯ ಆಗಬಹುದು ಎಂಬುದನ್ನು ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್
ಇನ್ನು ಕಾಂಗ್ರೆಸ್ ಎಸ್ಸಿ-ಎಸ್ಟಿ ಕಾಯ್ದೆಯ ಅನ್ಯಾಯದ ಬಗ್ಗೆ ಪ್ರತಿಭಟನೆ ನಡೆಸುತ್ತಿದೆ. ಅವರ ಕೆಲಸ ಅವರು ಮಾಡಲಿ, ನಮ್ಮ ಕೆಲಸ ನಾವು ಮಾಡುತ್ತೇವೆ ಎಂದರು. ಹಾಗೆ ಬಿಜೆಪಿ ಪರವಾಗಿ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಮತ ಚಲಾವಣೆ ಮಾಡಿರುವುದು ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಯಬಹುದೆ ಎಂಬ ಪ್ರಶ್ನೆಗೆ ಆಪರೇಷನ್ ಮಾಡುವುದಿಲ್ಲ. ಆದರೆ ಬಿಜೆಪಿ ಬಾಗಿಲು ತೆರೆಯುತ್ತಿದೆ. ಮುಂದಿನ ದಿನಗಳಲ್ಲಿ ಏನೆಲ್ಲಾ ರಾಜಕೀಯ ಬೆಳವಣಿಗೆ ಆಗಬಹುದು ಎಂಬುದನ್ನು ಕಾದು ನೋಡಿ ಎಂದು ಹೇಳಿದರು.