ಮೈಸೂರು :ಬೈ ಎಲೆಕ್ಷನ್ ಸೋಲಿನಿಂದ ಡಿ ಕೆ ಶಿವಕುಮಾರ್ ಹತಾಶರಾಗಿದ್ದಾರೆ. ಹಾಗಾಗಿ ಸಂತೋಷ್ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಸಿಎಂ ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಆರೋಗ್ಯ ವಿಚಾರಿಸಿದ್ದಾರೆ. ಡಿಕೆಶಿ ಈ ರೀತಿಯ ವಿಚಾರಗಳಲ್ಲಿ ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ಕಿಡಿಕಾರಿದ್ದಾರೆ.
ಸಂತೋಷ್ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ತರವಲ್ಲ.. ಬಿ.ವೈ.ವಿಜಯೇಂದ್ರ ಸಿಎಂ ಬದಲಾವಣೆಯಿಲ್ಲ
ಇನ್ನೂ ಎರಡೂವರೆ ವರ್ಷ ಇದೇ ಪ್ರಶ್ನೆ ಕೇಳಿಕೊಂಡು ಇರುತ್ತಾರೆ. ಸಿಎಂ ಬದಲಾವಣೆ ಅನ್ನುತ್ತಿರುವವರಿಗೆ ತಿರುಗೇಟು ನೀಡಿದರು. ಎರಡೂವರೆ ವರ್ಷಗಳವರೆಗೂ ಬಿಎಸ್‌ವೈ ಸಿಎಂ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲವೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಯಾವುದೇ ಸಮುದಾಯಗಳಿಗೆ ಅನ್ಯಾಯವಾಗಲ್ಲ
ವೀರಶೈವ ಲಿಂಗಾಯತ ಒಬಿಸಿ ಸೇರ್ಪಡೆ ವಿಚಾರವಾಗಿ ಮಾತನಾಡಿ, ಯಡಿಯೂರಪ್ಪ ಅವಧಿಯಲ್ಲಿ ಯಾವುದೇ ಸಮುದಾಯಗಳಿಗೆ ಅನ್ಯಾಯವಾಗಲ್ಲ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಕೆಲಸ ಮಾಡುತ್ತಾರೆ ಎಂದರು.
ಸಿಎಂ ಆಗಲು ಕುರುಬ ಸಮುದಾಯದ ಕೊಡುಗೆ?
ನೀವು ಸಿಎಂ ಆಗಲು ಕುರುಬ ಸಮುದಾಯದ ಕೊಡುಗೆ ಇದೆ ಎಂಬ ಹೆಚ್.ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿ, ಈಗಾಗಲೇ ನಳಿನ್ ಕುಮಾರ್ ಕಟೀಲ್ ಜತೆ ಸಿಎಂ ಸಮಾಲೋಚನೆ ನಡೆಸಿದ್ದಾರೆ. ರಾಷ್ಟ್ರೀಯ ನಾಯಕರ ಜೊತೆಯೂ ಚರ್ಚೆ ಮಾಡಲಾಗಿದೆ. ಆದಷ್ಟು ಬೇಗ ಇದಕ್ಕೆ ಉತ್ತರ ಸಿಗಲಿದೆ. ಯಾರಿಗೂ ಅನ್ಯಾಯ ಆಗುವ ಪ್ರಶ್ನೆಯೇ ಇಲ್ಲ ಎಂದರು.