ಮೈಸೂರು:''ಪದೇ ಪದೆ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರೇ, ನೀವು ರಾಜ್ಯಕ್ಕೆ ನೀಡಿರುವ ಕೊಡುಗೆಯಾದರು ಏನು? ಲಜ್ಜೆಗೆಟ್ಟ ಕರ್ನಾಟಕದ ಬಿಜೆಪಿಯನ್ನು ಮೊದಲು ಸರಿಮಾಡಿ. ನೀವು ಕರ್ನಾಟಕ ಅಲ್ಲದೇ ಇಡಿ ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ಬರುವುದಿಲ್ಲ'' ಎಂದು ವಿಧಾನ ಪರಿಷತ್ ಎಚ್.ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇಂದು ಮೈಸೂರಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ''ಬೇರೆ ಬ್ಯಾಂಕ್ಗಳ ಜೊತೆ ವಿಲೀನ ಮಾಡಿರುವ ಬ್ಯಾಂಕ್ಗಳನ್ನು ವಾಪಸ್ ಕೊಡಿ, ಹಿಂದಿ ಹೇರಿಕೆ ನಿಲ್ಲಿಸಿ, ನಂದಿನಿ ಅಸ್ತಿತ್ವವನ್ನು ಹಾಳು ಮಾಡಬೇಡಿ ಎಂದ ವಿಶ್ವನಾಥ್ ಅವರು, ''ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಮೋದಿ ಭೇಟಿಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ನಮ್ಮಂತವರು ಹಾಗೂ ಕುಮಾರಸ್ವಾಮಿಯಂತವರ ನೇರವಿನಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇನ್ಮುಂದೆ ಕರ್ನಾಟಕದಲ್ಲಿ ಅಷ್ಟೇ ಅಲ್ಲ, ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರುವುದಿಲ್ಲ'' ಎಂದು ವಾಕ್ ಸಮರ ನಡೆಸಿದರು.
ಪ್ರತಾಪನ ಬೆತ್ತಲೆ ಪ್ರಪಂಚ ನನ್ನ ಬಳಿಯಿದೆ:''ಸೋಮಣ್ಣ ಮತ್ತು ಸಿದ್ದರಾಮಯ್ಯ ಕೆಳ ಹಂತದಿಂದ ರಾಜಕೀಯಕ್ಕೆ ಬಂದವರು. ಅವರಿಗೆ ಎಲ್ಲವೂ ಗೊತ್ತಿದೆ. ನೀನು ವರುಣಾ ಕ್ಷೇತ್ರಕ್ಕೆ ಹೋಗಿ, ನಿನ್ನ ಪ್ರತಾಪ ತೋರಿಸಬೇಡ. ನಿನ್ನ ಬೆತ್ತಲೆ ಪ್ರಪಂಚದ ಪ್ರತಾಪಗಳು ನನ್ನ ಬಳಿ ಇದೆ. ಮುಂದಿನ ದಿನಗಳಲ್ಲಿ ಅದನ್ನು ಬಿಡುಗಡೆಗೊಳಿಸುತ್ತೇನೆ'' ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ವಿಶ್ವನಾಥ್ ವಾಗ್ದಾಳಿ ನಡೆಸಿದರು.