ಮೈಸೂರು: ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಹೂವಿನ ವ್ಯಾಪಾರ ನಡೆಸುತ್ತಿದ್ದ ದೇವರಾಜ ಮಾರುಕಟ್ಟೆಯ ಹೂವಿನ ಕೆಂದ್ರವನ್ನು ಪೊಲೀಸರು ಇಂದು ಬಂದ್ ಮಾಡಿದ್ದಾರೆ.
ಸಾಮಾಜಿಕ ಅಂತರ ಉಲ್ಲಂಘನೆ: ಮೈಸೂರಿನ ಹೂವಿನ ಮಾರುಕಟ್ಟೆ ಬಂದ್ - Mysore devaraja market
ಸಾಮಾಜಿಕ ಅಂತರ ಕಾಪಾಡದ ಹಿನ್ನಲೆ, ಮೈಸೂರಿನ ದೇವರಾಜ ಮಾರುಕಟ್ಟೆಯ ಹೂ ಖರೀದಿ ಕೇಂದ್ರವನ್ನು ಪೊಲೀಸರು ಬಂದ್ ಮಾಡಿದ್ದಾರೆ.
ಹೂವಿನ ಮಾರುಕಟ್ಟೆ
ದೇವರಾಜ ಮಾರುಕಟ್ಟೆಯ ಹೂವಿನ ವ್ಯಾಪಾರ ಹಾಗೂ ಖರೀದಿ ಕೇಂದ್ರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸಾರ್ವಜನಿಕರು ಮುಗಿಬೀಳುತ್ತಿದ್ದ ದೃಶ್ಯವನ್ನು 'ಈಟಿವಿ ಭಾರತ' ಗುರುವಾರ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ನಗರ ಪೊಲೀಸ್ ಇಲಾಖೆ, ಹೂವಿನ ವ್ಯಾಪಾರ ಹಾಗೂ ಖರೀದಿ ಕೇಂದ್ರವನ್ನು ಬಂದ್ ಮಾಡಿದೆ. ಮೇ.3ರವರೆಗೆ ವ್ಯಾಪಾರಿಗಳು ಹಾಗೂ ಗ್ರಾಹಕರು ಇತ್ತ ಸುಳಿದಾಡದಂತೆ ಎಚ್ಚರಿಕೆ ನೀಡಿದೆ.