ಮೈಸೂರು: ಮೈಸೂರು ನಗರದ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಬಿ.ಟಿ.ಕವಿತಾ ಅವರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದರು.
ಮೈಸೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಬಿ.ಟಿ.ಕವಿತಾ ನೇಮಕ - undefined
ಮೈಸೂರು ನಗರದ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಬಿ.ಟಿ.ಕವಿತಾ ಅವರನ್ನು ನೇಮಕ ಮಾಡಲಾಗಿದೆ.

ಡಿಸಿಪಿಯಾಗಿ ಬಿ.ಟಿ.ಕವಿತಾ ನೇಮಕ
ಮೈಸೂರಿನ ಕೆ.ಆರ್.ವಿಭಾಗದ ಎಸಿಪಿಯಾಗಿ, ನಂತರ ಭ್ರಷ್ಟಚಾರ ನಿಗ್ರಹ ದಳದ ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ರಾಜ್ಯ ಗುಪ್ತಚಾರ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೈಸೂರಿಗೆ ಡಿಸಿಪಿಯಾಗಿ ಇವರನ್ನು ವರ್ಗಾವಣೆ ಮಾಡಲಾಗಿತ್ತು.
ಆದರೆ ಮತ್ತೆ ರಾಜ್ಯ ಗುಪ್ತಚರ ವಿಭಾಗಕ್ಕೆ ವರ್ಗಾವಣೆಗೊಳಿಸಿ ಮರು ಆದೇಶ ಮಾಡಿತ್ತು. ಈಗ ಡಿಸಿಪಿಯಾಗಿ ಮತ್ತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದ್ದು, ಗುರುವಾರ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದರು. ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ. ಮುತ್ತುರಾಜ್ ಅವರು ಶುಭಕೋರಿದರು.