ಕರ್ನಾಟಕ

karnataka

ETV Bharat / state

ಕೆಎಸ್ಆರ್​ಟಿಸಿ ಬಸ್​​ ಡಿಕ್ಕಿ: ಬೈಕ್​​​ ಸವಾರ ಸ್ಥಳದಲ್ಲೇ ಸಾವು - buss and bike cillided

ಮೈಸೂರಿನಲ್ಲಿ ಕೆಎಸ್ಆರ್​ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.

ಬಸ್ ಡಿಕ್ಕಿ
ಬಸ್ ಡಿಕ್ಕಿ

By

Published : Feb 4, 2020, 10:19 AM IST

ಮೈಸೂರು:ಕೆಎಸ್ಆರ್​ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಳಿ ನಡೆದಿದೆ.

ಕೆಬ್ಬೆಹುಂಡಿ ಗ್ರಾಮದ ನಿವಾಸಿ ಮನುರಾಜ್ (33) ಮೃತಪಟ್ಟವರು. ಮೈಸೂರಿನ ರೇಷ್ಮೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮನುರಾಜ್ ಎಂದಿನಂತೆ ಕೆಲಸಕ್ಕೆಂದು ಬೈಕ್​ನಲ್ಲಿ ಮೈಸೂರಿಗೆ ಬರುತ್ತಿದ್ದಾಗ ಘಟನೆ ನಡೆದಿದೆ.

ಸ್ಥಳದಲ್ಲಿ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details