ಮೈಸೂರು: ಹುಣಸೂರು ಉಪ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯ ನಂತರ ಮಾತನಾಡಿದ ಅವರು, ಹುಣಸೂರಿನಲ್ಲಿ ಕಾಂಗ್ರೆಸ್ ಗೆಲುವು ಖಚಿತ. ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಚುನಾವಣೆಗಳಲ್ಲಿ ಪಕ್ಷಾಂತರಿಗಳಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ರಾಜಕಾರಣಿಗಳು ಭಾಷಣ ಮಾಡ್ತಾರೆ. ಆದರೆ ಮತದಾರರು ಸೈಲೆಟಾಂಗಿ ಅನರ್ಹರಿಗೆ ಉತ್ತರ ಕೊಡುತ್ತಾರೆ ಎಂದರು.