ಮೈಸೂರು: ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಂಜುಂಡೇಶ್ವರನ ದರ್ಶನ ಪಡೆದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಂಜುಂಡೇಶ್ವರನ ದರ್ಶನ ಪಡೆದ ಬಿ.ವೈ.ವಿಜಯೇಂದ್ರ - ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ
ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಂಜುಂಡೇಶ್ವರನ ದರ್ಶನ ಪಡೆದ ಬಿ.ವೈ.ವಿಜಯೇಂದ್ರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
B Y Vijayendra
ಸಿಎಂ ಪುತ್ರನಿಗೊಂದು ನ್ಯಾಯ? ಸಾಮಾನ್ಯರಿಗೊಂದು ನ್ಯಾಯ? ಎಂದು ಜನರು ಅಸಮಾಧಾನ ಹೊರಹಾಕಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯು ಕೊರೊನಾ ಕರ್ಪ್ಯೂ ಹಿನ್ನೆಲೆಯಲ್ಲಿ ಭಕ್ತರಿಗೆ ಪ್ರವೇಶ ನಿಷೇಧ ಮಾಡಿದೆ. ಆದರೂ ನಂಜುಂಡೇಶ್ವರನ ದರ್ಶನ ಪಡೆದ ವಿಜಯೇಂದ್ರರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.
ಸಾರ್ವಜನಿಕರು ದೇಗುಲದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರ ಫೋಟೋ ಹಾಗೂ ವಿಡಿಯೋ ಮಾಡದಂತೆ ಭದ್ರತಾ ಸಿಬ್ಬಂದಿ ಮಾಧ್ಯಮದವರಿಗೆ ನಿರ್ಬಂಧ ವಿಧಿಸಿದ್ದರು ಎಂದು ತಿಳಿದು ಬಂದಿದೆ.