ಮೈಸೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಈಗಾಗಲೇ ವಿವಿಧ ಪಕ್ಷಗಳ ಮುಖಂಡರು ಮಠಗಳು, ಸಾರ್ವಜನಿಕರನ್ನು ಭೇಟಿ ಮಾಡುತ್ತಿದ್ದಾರೆ.
ಉಪಚುನಾವಣೆ ಕಸರತ್ತು: ಸುತ್ತೂರು ಶಾಖಾ ಮಠಕ್ಕೆ ಕಾಂಗ್ರೆಸ್ ಮುಖಂಡರ ದಂಡು - ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ಮಂಜುನಾಥ್
ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸುತ್ತೂರು ಶಾಖಾ ಮಠಕ್ಕೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದರು.
ಸುತ್ತೂರು ಶಾಖಾ ಮಠಕ್ಕೆ ಕಾಂಗ್ರೆಸ್ ಮುಖಂಡರ ದಂಡು
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ವಿಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ಮಂಜುನಾಥ್, ಶಾಸಕ ತನ್ವೀರ್ ಸೇಠ್, ಡಾ.ಯತೀಂದ್ರ, ಮಾಜಿ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಡಾ. ಗೀತಾ ಮಹದೇವಪ್ರಸಾದ್, ಮಾಜಿ ಶಾಸಕ ವಾಸು ಸೇರಿದಂತೆ ಅನೇಕ ರಾಜಕೀಯ ಮುಖಂಡರು ಭೇಟಿ ನೀಡಿದ್ರು.
ಮಾಜಿ ಸಿಎಂ ಸಿದ್ದರಾಮಯ್ಯ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಕುಶಲೋಪರಿ ವಿಚಾರಿಸಿದರು. ನಂತರ ಮಾಧ್ಯಮ ಸಿಬ್ಬಂದಿಯನ್ನು ಹೊರಕಳುಹಿಸಿ ಸ್ವಾಮೀಜಿ ಕೈ ನಾಯಕರ ಜೊತೆ ಕೆಲಹೊತ್ತು ಚರ್ಚೆ ನಡೆಸಿದ್ರು.