ಮೈಸೂರು: ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತವಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕೆ.ಆರ್.ನಗರ ತಾಲೂಕಿನ ಚಿಕ್ಕಹನಸೋಗೆ ಗೇಟ್ ಬಳಿ ನಡೆದಿದೆ.
ಬೈಕ್-ಟಿಪ್ಪರ್ ನಡುವೆ ಅಪಘಾತ: ಸವಾರ ಸಾವು - byke rider died mysuru news
ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಸಾವನ್ನಪ್ಪಿದ ಬೈಕ್ ಸವಾರ
ಕೆ.ಆರ್.ನಗರ ತಾಲೂಕಿನ ಚಿಕ್ಕಹನಸೋಗೆ ಗೇಟ್ ಬಳಿ ಟಿಪ್ಪರ್ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಹನಸೋಗೆ ಗ್ರಾಮದ ನಿವಾಸಿಯಾದ ಜವರೇಗೌಡ(62) ಸವನ್ನಪ್ಪಿದ ವ್ಯಕ್ತಿಯಾಗಿದ್ದಾನೆ. ಇನ್ನು ಟಿಪ್ಪರ್ ಚಾಲಕ ಅಪಘಾತವಾದ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳದಲ್ಲೇ ಸಾವನ್ನಪ್ಪಿರುವ ಜವರೇಗೌಡನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಇನ್ನು ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.