ಮೈಸೂರು: ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 17 ರಂದು 51 ನಾಮಪತ್ರಗಳು ಸಲ್ಲಿಕೆಯಾಗಿವೆ. ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಅಮ್ಆದ್ಮಿ ಪಾರ್ಟಿಯಿಂದ ರಾಜಶೇಖರ್, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಕೆ.ವೆಂಕಟೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಕೆ.ಆರ್ ನಗರ ವಿಧಾನ ಸಭಾ ಕ್ಷೇತ್ರದಿಂದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ರವಿಶಂಕರ್ ಡಿ. ಭಾರತೀಯ ಜನತಾ ಪಕ್ಷದಿಂದ ಹೆಚ್.ಟಿ. ವೆಂಕಟೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಹೆಚ್.ಪಿ. ಮಂಜುನಾಥ್ ಕೆ ಆರ್ ಎಸ್ ಪಕ್ಷದಿಂದ ತಿಮ್ಮಾಬೋವಿ, ಪಕ್ಷೇತರ ಅಭ್ಯರ್ಥಿಗಳಾಗಿ ಬೀರೇಶ್, ಪಿ. ಎಸ್. ಯಡಿಯೂರಪ್ಪ ಹಾಗೂ ಉಮೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಹೆಚ್.ಡಿ.ಕೋಟೆ ವಿಧಾನ ಸಭಾ ಕ್ಷೇತ್ರದಿಂದ ಉತ್ತಮ ಪ್ರಜಾಕೀಯ ಪಾರ್ಟಿಯಿಂದ ನಾಗೇಶ.ಹೆಚ್.ಎಂ. ಜನತಾದಳ (ಜಾತ್ಯತೀತ) ಪಕ್ಷದಿಂದ ಸಿ.ಜಯಪ್ರಕಾಶ್ (02), ಸಮಾಜವಾದಿ ಜನತಾ ಪಾರ್ಟಿಯಿಂದ ಕೆ.ವಿ. ರಾಜು, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಅನಿಲ್ ಕುಮಾರ್ ಸಿ.(02), ಪಕ್ಷೇತರ ಅಭ್ಯರ್ಥಿಗಳಾಗಿ ಎ.ಎಂ. ಬಾಬು, ಗಿರಿಜಾಂಬ ಅವರು ನಾಮಪತ್ರ ಸಲ್ಲಿಸಿದ್ದಾರೆ.
ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ದರ್ಶನ್ ಡಿ ಅವರು (04) ನಾಮಪತ್ರ ಸಲ್ಲಿಸಿದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಎಸ್. ಹರೀಶ್, ಜನತಾದಳ (ಜಾತ್ಯತೀತ) ಪಕ್ಷದಿಂದ ಜಿ.ಟಿ. ದೇವೇಗೌಡ (02), ಸಮಾಜವಾದಿ ಜನತಾ ಪಾರ್ಟಿಯಿಂದ ಮೆಹುಲ್ ಜೆ. ಪಟೇಲ್, ಅಮ್ ಆದ್ಮಿ ಪಾರ್ಟಿಯಿಂದ ಕಿರಣ್ ನಾಗೇಶ್ ಕಲ್ಯಾಣಿ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಎಸ್. ಸಿದ್ದೇಗೌಡ (02), ಪಕ್ಷೇತರ ಅಭ್ಯರ್ಥಿಯಾಗಿ ಬಿ. ಪ್ರಕಾಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ.