ಮೈಸೂರು:ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು: ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು, ಇಬ್ಬರು ಸ್ಥಳದಲ್ಲೇ ಸಾವು - ಮೈಸೂರಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು
ಮೈಸೂರಲ್ಲಿ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
![ಮೈಸೂರು: ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು, ಇಬ್ಬರು ಸ್ಥಳದಲ್ಲೇ ಸಾವು ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು](https://etvbharatimages.akamaized.net/etvbharat/prod-images/768-512-10540581-thumbnail-3x2-bngjpg.jpg)
Car collides with tree
ಹೆಚ್.ಡಿ.ಕೋಟೆ ತಾಲೂಕಿನ ಅಲತ್ತೂರು ಗ್ರಾಮದ ಶಿವ(34), ಬೋಗಾದಿ ನಿವಾಸಿ ನಂದನ್(24) ಮೃತಪಟ್ಟ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಇವರಿಬ್ಬರು ಹೆಚ್.ಡಿ. ಕೋಟೆಯಲ್ಲಿ ಕೆಲಸ ಮುಗಿಸಿಕೊಂಡು ತಡರಾತ್ರಿ ಮೈಸೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ ಜಯಪುರ ಹೋಬಳಿಯ ಉದ್ಬೂರು ಗೇಟ್ ಬಳಿ ಕಾರು ನಿಯಂತ್ರಣ ಕಳೆದುಕೊಂಡು ರಭಸವಾಗಿ ಮರಕ್ಕೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರ ಪ್ರಾಣಪಕ್ಷಿ ಸ್ಥಳದಲ್ಲೇ ಹಾರಿಹೋಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಮೃತದೇಹವನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಿದ್ದಾರೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.