ಮೈಸೂರು:ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ವಿಜಯನಗರದ ನಾಲ್ಕನೇ ಹಂತದ ೪ನೇ ಕ್ರಾಸ್ ನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿಯ ಮೇರೆಗೆ ಮೈಸೂರು ನಗರ ಸಿಸಿಬಿ ಮತ್ತು ವಿಜಯನಗರ ಪೊಲೀಸರು ಮನೆಗೆ ದಾಳಿ ನಡೆಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದು, ಅಸ್ಸೋಂ ಮೂಲದ ಮತ್ತು ಮೈಸೂರು ಮೂಲದ ಒಟ್ಟು ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.