ಕರ್ನಾಟಕ

karnataka

ETV Bharat / state

ಕೊರೊನಾ ನಿರ್ವಹಣೆಯಲ್ಲಿ‌ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲ: ಸಿದ್ದರಾಮಯ್ಯ - ಕೇಂದ್ರ ಹಾಗೂ ರಾಜ್ಯ ವಿಫಲ

ರಾಜ್ಯಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೋಂಕನ್ನು ನಿಯಂತ್ರಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Siddaramayya
ಸಿದ್ದರಾಮಯ್ಯ

By

Published : Jul 8, 2020, 1:24 PM IST

ಮೈಸೂರು:ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣದಲ್ಲಿ ವಿಫಲ ಎಂದ ಸಿದ್ದರಾಮಯ್ಯ

ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕೊರೊನಾ ಆರಂಭವಾದಾಗ ಬಿಗಿ ನಿಲುವು ತೆಗೆದುಕೊಂಡಿದ್ದರೆ ಇಷ್ಟೊಂದು ಪ್ರಮಾಣದಲ್ಲಿ ಹರಡುತ್ತಿರಲಿಲ್ಲ. ಸೋಂಕು ವೇಗವಾಗಿ ಹರಡುತ್ತಿರುವ ಸಮಯದಲ್ಲಿ ಲಾಕ್​ಡೌನ್ ಮಾಡಬೇಕಾಯಿತು ಎಂದು ಸಲಹೆ ನೀಡಿದರು.

ರಾಜ್ಯ ಸರ್ಕಾರ ಕೂಡ ಕೊರೊನಾ ನಿರ್ವಹಣೆಯಲ್ಲಿ ವಿಫಲವಾಗಿದೆ. ಕೊರೊನಾ ಖರ್ಚಿನ ಬಗ್ಗೆ ರಾಜ್ಯ ಸರ್ಕಾರ ಲೆಕ್ಕಕೊಡಬೇಕು. ಅವರು ಲೆಕ್ಕ ಕೊಡದಿದ್ದರೆ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಅರ್ಥ ಬರಲಿದೆ ಎಂದರು.

ಬೆಂಗಳೂರಿನಲ್ಲಿ ಕೊರೊನಾ ಅಬ್ಬರ ಜಾಸ್ತಿಯಾಗುತ್ತಿದ್ದು, ಆತಂಕದಿಂದ ಜನ ನಗರವನ್ನು ಬಿಡುತ್ತಿದ್ದಾರೆ. ಅಂತಹ ಜನರಿಗೆ ಆತ್ಮವಿಶ್ವಾಸ ಮೂಡುವಂತೆ ಸರ್ಕಾರ ಮಾಡಬೇಕಿದೆ‌ ಎಂದು ಸಿದ್ದರಾಮಯ್ಯ ಹೇಳಿದರು.

ಸಿಂಗಲ್ ವಾಯ್ಸ್ ಆದೆ:

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​ನೊಂದಿಗೆ ಮೈತ್ರಿ ಬೇಡ ಅಂದಿದ್ದ ನನ್ನ ಮಾತು ಕೇಳಲಿಲ್ಲ. ಆಗ ಸಿಂಗಲ್ ವಾಯ್ಸ್ ಆದೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ABOUT THE AUTHOR

...view details