ಮೈಸೂರು :ಪ್ರೀತಿಯ ಹೆಸರಲ್ಲಿ ವಂಚನೆಗೊಳಗಾದ ವಿದ್ಯಾರ್ಥಿನಿಯೋರ್ವಳು ಪ್ರಿಯಕರನನ್ನು ಗಲ್ಲಿಗೇರಿಸಿ ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕು ಚೆನ್ನಪಟ್ಟಣ ಗ್ರಾಮದ ಬಿಎ ವ್ಯಾಸಂಗ ಮಾಡುತ್ತಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಅದೇ ಗ್ರಾಮದ ಲೋಕೇಶ್ ಎಂಬಾತನನ್ನು ಐದು ವರ್ಷಗಳಿಂದ ಪ್ರೀತಿಸುತ್ತಿದ್ದಳು.
ಮದುವೆ ಆಗುವುದಾಗಿ ನಂಬಿಸಿದ ಲೋಕೇಶ್ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ಮಧ್ಯೆ ಸುರೇಶ್ ಎಂಬಾತ ಆಕೆಯ ಜೊತೆ ಮಾತನಾಡಿ ಮಧ್ಯಪ್ರವೇಶಿಸಿದ್ದಕ್ಕೆ ಲೋಕೇಶ್, ಶೋಭಾಗೆ ಕೈಕೊಟ್ಟಿದ್ದಾನೆ ಎನ್ನಲಾಗಿದೆ.
ಕಳೆದ 5 ವರ್ಷದಿಂದ ಪ್ರೀತಿಸುತ್ತಿದ್ದ ಲೋಕೇಶ್ ನಂತರ ಬೆಂಗಳೂರಿನಲ್ಲಿ ಸೆಟಲ್ ಆಗಿ ಮೋಸ ಮಾಡಿದ್ದಾನೆ. ನ್ಯಾಯ ಒದಗಿಸುವಂತೆ ಮೃತ ಯುವತಿಯ ಮನೆಯವರು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.
ದೂರು ಕೊಟ್ಟ ನಂತರ ಲೋಕೇಶ್ ತನ್ನ ಪ್ರಿಯತಮೆಯ ಮನೆಗೆ ಬಂದು ಗಲಾಟೆ ಮಾಡಿದ್ದಾನೆ. ಇದರಿಂದ ನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯವರು ಆಕೆಯ ಅಂತ್ಯಕ್ರಿಯೆ ನೆರವೇರಿಸಿ 11 ದಿನಗಳ ಕಾರ್ಯ ಮಾಡಿದ ನಂತರ ಮನೆ ಸ್ವಚ್ಛ ಮಾಡುವಾಗ ಆಕೆ ಬರೆದ ಡೆತ್ನೋಟ್ ದೊರೆತಿದೆ. ಲೋಕೇಶ್ ವಂಚಿಸಿದ್ದು, ಸುರೇಶ್ ಹೆದರಿಸಿದ ವಿಚಾರವನ್ನ ಡೆತ್ನೋಟ್ ನಲ್ಲಿ ಉಲ್ಲೇಖಿಸಿದ್ದಾಳೆ.
ತನ್ನ ಸಾವಿಗೆ ಲೋಕೇಶ್ ಕಾರಣವೆಂದು ಡೆತ್ನೋಟ್ನಲ್ಲಿ ಬರೆದಿರುವ ಯುವತಿ, ಲೋಕೇಶ್‌ಗೆ ಜೈಲು ಶಿಕ್ಷೆ ನೀಡಬೇಕು, ಗಲ್ಲಿಗೆ ಏರಿಸಬೇಕೆಂದು ಮನವಿ ಮಾಡಿದ್ದಾಳೆ. ಮತ್ತೊಂದೆಡೆ ಮೃತಳ ತಾತ ಸಹ ಲೋಕೇಶ್ ಹಾಗೂ ಇತರರ ವಿರುದ್ಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ