ಮೈಸೂರು:ತಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದೆ. ಅರಣ್ಯ ಇಲಾಖೆಗೆ ಚಿರತೆ ಸೆರೆಗಾಗಿ ಎಷ್ಟೇ ಪ್ರಯತ್ನಪಟ್ಟರೂ ಸಿಗುತ್ತಿಲ್ಲ. ಈ ನಡುವೆ ಮೇಕೆ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ.
ಒಂದು ಕಡೆ ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಳ್ಳುತ್ತಿದೆ. ಮತ್ತೊಂದೆಡೆ ಮನುಷ್ಯರ ಮೇಲೂ ದಾಳಿ ನಡೆಸುತ್ತಿದೆ. ತಾಲ್ಲೂಕಿನ ಯಾಚೇನಹಳ್ಳಿ ಗ್ರಾಮದ ನಿವಾಸಿ ರಮೇಶ್ ಎಂಬುವರಿಗೆ ಸೇರಿದ ಮೇಕೆಯನ್ನು ಕೊಂದುಹಾಕಿದೆ.