ಕರ್ನಾಟಕ

karnataka

ETV Bharat / state

ಕೆಎಸ್​ಆರ್​ಟಿಸಿ ಬಸ್ ಹರಿದು ಬಾಲಕ ಸಾವು; ಆಂಬ್ಯುಲೆನ್ಸ್ ಸಿಗದೆ ತಂದೆಯ ಪರದಾಟ - ನಂಜನಗೂಡು ಸಂಚಾರಿ ಪೊಲೀಸ್ ಠಾಣೆ

ನಂಜನಗೂಡು ಪಟ್ಟಣದ ಹಳೆ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಚಕ್ರ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ನಡೆಯಿತು.

ಕೆಎಸ್​ಆರ್​ಟಿಸಿ ಬಸ್ ಹರಿದು ಬಾಲಕ ಸಾವು
ಕೆಎಸ್​ಆರ್​ಟಿಸಿ ಬಸ್ ಹರಿದು ಬಾಲಕ ಸಾವು

By

Published : Oct 28, 2022, 8:05 PM IST

ಮೈಸೂರು: ಕೆಎಸ್​ಆರ್​ಟಿಸಿ ಬಸ್ಸಿನ ಚಕ್ರ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ನಂಜನಗೂಡು ಪಟ್ಟಣದ ಹಳೆ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

14 ವರ್ಷದ ಪ್ರಜ್ವಲ್ ಮೃತ ಬಾಲಕ. ನಂಜನಗೂಡು-ಹುಲ್ಲಹಳ್ಳಿ-ಹಂಪಾಪುರಕ್ಕೆ ಸಂಚರಿಸುವ ಸಾರಿಗೆ ಬಸ್ ಇದಾಗಿತ್ತು. ನಂಜೀಪುರ ಗ್ರಾಮದ ಪ್ರಕಾಶ್ ಮತ್ತು ಪುತ್ರ ಪ್ರಜ್ವಲ್ ಇಬ್ಬರೂ ಗ್ರಾಮಕ್ಕೆ ತೆರಳುವಾಗ ದುರ್ಘಟನೆ ಸಂಭವಿಸಿದೆ.

ಕೆಎಸ್​ಆರ್​ಟಿಸಿ ಬಸ್ ಹರಿದು ಬಾಲಕ ಸಾವು

ಬಸ್ ಸಂಚರಿಸುವ ಸಮಯದಲ್ಲಿ ಮುಂದಿನ ಬಾಗಿಲಿನಿಂದ ಇಳಿಯುತ್ತಿದ್ದಾಗ ಪ್ರಜ್ವಲ್ ಕೆಳಗೆ ಬಿದ್ದಿದ್ದಾನೆ. ಹಿಂಬದಿಯ ಚಕ್ರ ಆತನ ಹೊಟ್ಟೆಯ ಮೇಲೆ ಹರಿದಿದೆ. ಪರಿಣಾಮ, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಸ್ ಚಾಲಕನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿತ್ತು. ಆದರೆ, ಆಂಬ್ಯುಲೆನ್ಸ್‌ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬರಲೇ ಇಲ್ಲ. ಈ ಸಂದರ್ಭದಲ್ಲಿ ಮೃತ ಬಾಲಕನ ತಂದೆಯ ಆಕ್ರಂದನ ಮುಗಿಲು ಮುಟ್ಟಿತ್ತು.

ನಂತರ ಆಟೋ ಮೂಲಕ ಶವವನ್ನು ಮರಣೋತ್ತರ ಪರೀಕ್ಷೆಗೆ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಮೂಡಿಗೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: ಐವರ ಸ್ಥಿತಿ ಗಂಭೀರ

ABOUT THE AUTHOR

...view details