ಕರ್ನಾಟಕ

karnataka

ETV Bharat / state

ಚುನಾವಣಾ ಪ್ರಚಾರಕ್ಕೆ 18ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ: ಡಿ ಸಿ ರಾಜೇಂದ್ರ ಪ್ರಸಾದ್​ - ಮಕ್ಕಳನ್ನು ಚುನಾವಣಾ ಪ್ರಚಾ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಇನ್ನೇನು ಚುನಾವಣಾ ಪ್ರಚಾರ ಕಾರ್ಯವೂ ಪ್ರಾರಂಭಗೊಳ್ಳುತ್ತದೆ. ಈ ಸಂದರ್ಭದಲ್ಲಿ ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.

Mysore DC K V Rajendra Prasad
ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಪ್ರಸಾದ್​

By

Published : Mar 23, 2023, 8:08 PM IST

ಮೈಸೂರು: 2023 ರ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ಕೆ 18 ವರ್ಷಕ್ಕಿಂತ ಕೆಳಗಿರುವ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಪ್ರಸಾದ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತ ಸರ್ಕಾರ ಹಾಗೂ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಯನ್ನು 1992 ರ ಡಿಸೆಂಬರ್ 11 ರಂದು ಒಪ್ಪಿ ಅನುಮೋದಿಸಿದ್ದು, ಈ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015 ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿತವಾಗಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸೂಕ್ತಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯಗಳಲ್ಲಿ (ಪ್ರಚಾರ ಹಾಗೂ ಇನ್ನಿತರೆ ಕಾರ್ಯಗಳು) ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಹಾಗೂ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಈ ಕುರಿತು ಮಕ್ಕಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷ ಡಾ. ಕೆ.ವಿ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿ ಪ್ರಚಾರ, ನಿರ್ವಹಣಾ ಸಮಿತಿ ಸಭೆ: ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ..!

ABOUT THE AUTHOR

...view details