ಮೈಸೂರು :ರಿಂಗ್ ರಸ್ತೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಮಯ ಪ್ರಜ್ಞೆ ಮೆರೆದ ಸಂಚಾರಿ ಪೊಲೀಸರಿಗೆ ಪೊಲೀಸ್ ಆಯುಕ್ತರು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ.
ಮಾರ್ಚ್ 22ರ ಸಂಜೆ ಬೋಗಾದಿ ಮತ್ತು ಹಿನ್-ಕಲ್ ರಿಂಗ್ ರಸ್ತೆಯ ಮಧ್ಯೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಹಿಂಬದಿಯ ಸವಾರ ಗಾಯಗೊಂಡಿದ್ದ.