ಮೈಸೂರು: ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಿದ ಪರಿಣಾಮ, ಪೊಲೀಸರ ವಿರುದ್ಧ ವ್ಯಕ್ತಿಯೋರ್ವ ಹೈಡ್ರಾಮಾ ಮಾಡಿದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲು ಪೊಲೀಸರು ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ರಸ್ತೆಯಲ್ಲಿ ಮಲಗಿ ವ್ಯಕ್ತಿಯೊಬ್ಬ ಹೈಡ್ರಾಮಾ ಮಾಡಿದ್ದಾನೆ. 10 ಗಂಟೆಯ ನಂತರ ಓಡಾಡಬಾರದು ಅಂತಾ ಹೇಳಿದ್ದಕ್ಕೆ ಪೊಲೀಸರ ಜತೆ ಮಾತಿನ ಚಕಮಕಿ ನಡೆಸಿದ್ದಾನೆ. ಬಳಿಕ ಬೈಕ್ ಅನ್ನು ರಸ್ತೆಯಲ್ಲಿ ನಿಲ್ಲಿಸಿ, ರಸ್ತೆಯಲ್ಲೇ ಬಿದ್ದು ಹೊರಳಾಡಿದ್ದಾನೆ.