ಮೈಸೂರು: ಹಳೆ ವೈಷಮ್ಯದ ಹಿನ್ನೆಲೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು, ಇಬ್ಬರು ಯುವಕರು ಗಾಯಗೊಂಡಿರುವ ಘಟನೆ ಇಲ್ಲಿನ ಹಂಚ್ಯಾ ಗ್ರಾಮದಲ್ಲಿ ನಡೆದಿದೆ. ಘಟನೆಯ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ನಗರದ ಹೊರವಲಯದಲ್ಲಿರುವ ಹಂಚ್ಯಾ ಗ್ರಾಮಕ್ಕೆ ಪಕ್ಕದ ಗ್ರಾಮದ ರಮ್ಮನಹಳ್ಳಿಯ ಯುವಕರ ಗುಂಪೊಂದು ಚಾಕು, ಮಚ್ಚುಗಳನ್ನು ಹಿಡಿದು ನುಗ್ಗಿ ಹೋಟೆಲ್ನಲ್ಲಿ ಕುಳಿತಿದ್ದ ಕುಮಾರ್ ಹಾಗೂ ಪೈಲ್ವಾನ್ ನಂದೀಶ್ ಎಂಬುವರ ಮೇಲೆ ಹಲ್ಲೆ ಮಾಡಿದೆ. ಸ್ಥಳಕ್ಕೆ ಬಂದ ಹಂಚ್ಯಾ ಗ್ರಾಮಸ್ಥರು ಯುವಕರನ್ನು ಓಡಿಸಿದ್ದಾರೆ. ಸ್ಥಳಕ್ಕೆ ರಮ್ಮನಹಳ್ಳಿ ಉಪ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆಗೊಳಗಾದ ಯುವಕರನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.