ಮೈಸೂರು: ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅವರ ಕುಟುಂಬಸ್ಥರು ಅರಮನೆಯ ಬಲರಾಮ ಗೇಟ್ ಬಳಿ ಕೋಟೆ ಆಂಜನೇಯ ದೇವಾಲಯ ಮುಂಭಾಗ ನಂದಿ ಧ್ವಜಕ್ಕೆ 2.30 ಗಂಟೆಯ ಶುಭ ಮಕರ ಲಗ್ನದಲ್ಲಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯಗಳು, ನಾಡಿಗೆ ಒಳ್ಳೆಯದಾಗಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಜೊತೆಯಲ್ಲಿ ಅವರ ಕುಟುಂಬದವರು, ಮೈಸೂರು ಜಿಲ್ಲಾ ಉಸ್ತುವರಿ ಸಚಿವ ಎಸ್.ಟಿ ಸೋಮಶೇಖರ್, ಸಚಿವ ಬಿ ಸಿ ಪಾಟೀಲ್, ಸುನೀಲ್ ಕುಮಾರ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.