ಮೈಸೂರು: ನಾವು ಮನೆಯಲ್ಲಿ ಕೂತರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಜರಾತ್ನ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಪ್ರಭಾವ ಬೀರುವುದಿಲ್ಲ, ನಾವು ಮನೆಯಲ್ಲೇ ಕೂತರು ಗೆಲ್ಲುತ್ತೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಮುಂದಿನ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರನ್ನು ಮನೆಗೆ ಕಳುಹಿಸುತ್ತೇವೆ. ಆ ಚುನಾವಣೆಯಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುವ ಕಾರ್ಯಕ್ರಮ ಇದೆ. ಆ ಕಾರಣದಿಂದ ಅವರು ಮನೆಯಲ್ಲೇ ಕೂತಿರುತ್ತಾರೆ ಎಂದು ವ್ಯಂಗ್ಯವಾಡಿದರು.