ಮೈಸೂರು :ಫೆಬ್ರವರಿ 14ರಂದು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂದಿನ ರಾಜಕೀಯದ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ ಹೇಳಿದರು.
ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಮುಸ್ಲಿಮರು ಕಾಂಗ್ರೆಸ್ನಿಂದ ಒಬ್ಬೊಬ್ಬರಾಗಿ ಹೊರ ಬರುತ್ತಿದ್ದಾರೆ. ಇದಕ್ಕೆ ಧರ್ಮ ಗುರುಗಳ ಬೆಂಬಲ ಇದೆ. ನಾನು ಫೆಬ್ರವರಿ 14ರಂದು ಪ್ರೇಮಿಗಳ ದಿನದಂದು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ನನ್ನ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುತ್ತೇನೆ.
ನನ್ನ ಮುಂದೆ ಮೂರು ಆಯ್ಕೆಗಳಿವೆ. ಒಂದು ಜೆಡಿಎಸ್, ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ ಆಗಿದ್ದು, ಈ ಬಗ್ಗೆ ಮುಂದೆ ತೀರ್ಮಾನ ಕೈಗೊಳ್ಳುತ್ತೇನೆ ಎಂದರು. ಫೆಬ್ರವರಿ ಕೊನೆಯ ವಾರ ಅಲ್ಪಅಸಂಖ್ಯಾತರು, ಲಿಂಗಾಯತರು ಹಾಗೂ ಒಕ್ಕಲಿಗರನ್ನು ಸೇರಿಸಿಕೊಂಡು ಅಲಿಂಗ ಸಮಾವೇಶ ನಡೆಸುತ್ತೇವೆ.