ಕರ್ನಾಟಕ

karnataka

ETV Bharat / state

ಕೊರೊನಾ ಗೆದ್ದು ಬಂದ ಮೈಸೂರು ಜಿಲ್ಲಾಸ್ಪತ್ರೆ ವೈದ್ಯೆಯ ಆರೋಗ್ಯ ವಿಚಾರಿಸಿದ ಸಿಎಂ

ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ನೀಡುವ ಡಾ. ಕೆ.ತ್ರಿವೇಣಿ ಹಾಗೂ ಅವರ ಮಗಳು ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಸದಾ ಒತ್ತಡದಲ್ಲಿ ಕೆಲಸ ಮಾಡುವ ನೀವುಗಳು ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಾ. ತ್ರಿವೇಣಿ ಅವರಿಗೆ ಹೇಳಿದರು.

CM inquired about the health of the  Dr. Triveni
ಜಿಲ್ಲಾಸ್ಪತ್ರೆಯ ವೈದ್ಯೆ ಡಾ.ತ್ರಿವೇಣಿ ಅವರ ಆರೋಗ್ಯ ವಿಚಾರಿಸಿದ ಸಿಎಂ

By

Published : May 16, 2021, 11:44 AM IST

ಮೈಸೂರು: ಕೋವಿಡ್ ಹಿನ್ನೆಲೆಯಲ್ಲಿ ಸದಾ ಒತ್ತಡದಲ್ಲಿ ಕೆಲಸ ಮಾಡುವ ನೀವುಗಳು ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೈಸೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ತ್ರಿವೇಣಿ ಅವರಿಗೆ ಹೇಳಿದರು.

ಜಿಲ್ಲಾಸ್ಪತ್ರೆಯ ವೈದ್ಯೆ ಡಾ. ತ್ರಿವೇಣಿ ಅವರ ಆರೋಗ್ಯ ವಿಚಾರಿಸಿದ ಸಿಎಂ

ಮೈಸೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ನೀಡುವ ಡಾ. ಕೆ.ತ್ರಿವೇಣಿ ಹಾಗೂ ಅವರ ಮಗಳು ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಪ್ರಸ್ತುತ ಸೇವೆ ಮುಂದುವರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ ಆಗಿರುವ ಡಾ. ತ್ರಿವೇಣಿ ಹಾಗೂ ಅವರಂತೆ ವಿವಿಧ ಜಿಲ್ಲೆಯ ಹಲವು ವೈದ್ಯರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು.‌

ನಿಮಗೂ ಹಾಗೂ ನಿಮ್ಮ ಮಗಳಿಗೂ ಕೋವಿಡ್ ಬಂದಿದ್ದಾಗಿ ತಿಳಿದು ಬಂದಿದೆ. ಹೀಗಾಗಿ ಜನರ ಜೀವ ಉಳಿಸಲು ಮೊದಲ ಆದ್ಯತೆ ನೀಡಿರುವ ನೀವುಗಳು ನಿಮ್ಮ ಆರೋಗ್ಯದಷ್ಟೇ ನಿಮ್ಮ ಕುಟುಂಬದ ಆರೋಗ್ಯದ ಮೇಲೂ ಕಾಳಜಿ ವಹಿಸಿ ಎಂದು ಸಲಹೆ ನೀಡಿದರು.

ಕೋವಿಡ್ ಸಮಯದಲ್ಲಿ ಬಹಳ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯವಾದದ್ದು ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಬಳಿಕ ಮಾತನಾಡಿದ ಡಾ. ತ್ರಿವೇಣಿ, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ತಗ್ಗಿಸಲು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಿದೆ ಎಂದು ಹೇಳಿದರು.

ABOUT THE AUTHOR

...view details