ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆಯಿಂದ ಎರಡು ದಿನಗಳ ಕಾಲ ತಮ್ಮ ತವರು ಜಿಲ್ಲೆ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಡಿಸೆಂಬರ್ 22ರಂದು ಬೆಳಿಗ್ಗೆ 11ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನ ಕೆ.ಎನ್.ಎಸ್ ಬಡಾವಣೆಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಹಾಗೂ ತರಬೇತಿ ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುವರು.
ಮಧ್ಯಾಹ್ನ 12:30ಕ್ಕೆ ಮೈಸೂರು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಪೆರಿಫೆರಲ್ ಕ್ಯಾನ್ಸರ್ ಕೇಂದ್ರ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಸಮಾರಂಭ ಹಾಗೂ ಕೆ.ಆರ್.ಎಸ್ ರಸ್ತೆಯ ಪಿಕೆಟಿಬಿ ಆಸ್ಪತ್ರೆ ಆವರಣದಲ್ಲಿ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಸೇರಿದ ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 4ಕ್ಕೆ ನಂಜನಗೂಡು ತಾಲೂಕಿನ ಕವಲಂದೆ ಪೊಲೀಸ್ ಠಾಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ ಹಾಗೂ ಜಯಪುರ ಪೊಲೀಸ್ ಠಾಣೆ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಂಜೆ 5.30ಕ್ಕೆ ಮೈಸೂರು ಅರಮನೆ ಅವರಣದಲ್ಲಿ ನಡೆದ ಅರಮನೆ ಫಲಪುಷ್ಪ ಪ್ರದರ್ಶನ 2023 ಕಾರ್ಯಕ್ರಮ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಭಾಗವಹಿಸುವರು.