ಕರ್ನಾಟಕ

karnataka

ETV Bharat / state

ಲಸಿಕೆ ಸಂಗ್ರಹಣೆಗೆ ಕೋಲ್ಡ್ ಸ್ಟೋರೇಜ್​ ಸಮಸ್ಯೆ ಇಲ್ಲ: ಡಿಸಿ ರೋಹಿಣಿ ಸಿಂಧೂರಿ - ಕೋವ್ಯಾಕ್ಸಿನ್ ಲಸಿಕೆ

ಜಿಲ್ಲೆಯಲ್ಲಿ 162 ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ಸಿದ್ಧತೆ ಮಾಡಿಕೂಳ್ಳಲಾಗಿದೆ. ಇದರ ಜೊತೆಗೆ 26 ಖಾಸಗಿ ಆಸ್ಪತ್ರೆಗಳಲ್ಲಿ ಸಹ ಲಸಿಕೆ ಹಾಕಲಾಗುವುದು. ಇಂದು ಎರಡನೆಯ ಡ್ರೈ ರನ್ ನಡೆಸಲಾಗುತ್ತಿದೆ. ಲಸಿಕೆ ಸಂಗ್ರಹಕ್ಕೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

District Collector Rohini Sindhuri
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿಕೆ

By

Published : Jan 8, 2021, 2:19 PM IST

ಮೈಸೂರು: ಕೋವ್ಯಾಕ್ಸಿನ್ ಲಸಿಕೆ ಸಂಗ್ರಹ ಮಾಡಲು ಜಿಲ್ಲೆಯಲ್ಲಿ ಕೋಲ್ಡ್ ಸ್ಟೋರೇಜ್ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿಕೆ

ಇಂದು ಎರಡನೇ ಡ್ರೈ ರನ್ ಉದ್ಘಾಟನೆ ಮಾಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಲಸಿಕೆ ಯಾವಾಗ ಬರುತ್ತದೆ ಎಂದು ಗೊತ್ತಿಲ್ಲ. ಅದರೆ ಬಹು ಬೇಗ ಬರುತ್ತದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೂಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ 162 ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ 26 ಖಾಸಗಿ ಆಸ್ಪತ್ರೆಗಳಲ್ಲಿ ಸಹ ಲಸಿಕೆ ಹಾಕಲಾಗುವುದು. ಇಂದು ಎರಡನೆಯ ಡ್ರೈ ರನ್ ನಡೆಸಲಾಗುತ್ತಿದೆ. ಲಸಿಕೆ ಸಂಗ್ರಹಕ್ಕೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಮಾಡಲಾಗಿದೆ. ಮೊದಲ ಹಂತದಲ್ಲಿ 32 ರಿಂದ 33 ಸಾವಿರ ಕೊರೊನಾ ವಾರಿಯರ್ಸ್​ಗೆ ಲಸಿಕೆ ಹಾಕಲಾಗುವುದು. ಇದು ಲಸಿಕೆ ಬಂದ ಮೂರು ದಿನದಲ್ಲಿ ಮುಗಿಯಲಿದೆ. ಪ್ರತಿಯೊಬ್ಬರಿಗೂ ಎರಡು ಡೋಸ್ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಓದಿ : ಸಿದ್ದರಾಮಯ್ಯ ಸುಳ್ಳು ಹೇಳುವ ಭವಿಷ್ಯಗಾರರು: ಡಿಸಿಎಂ ಗೋವಿಂದ ಕಾರಜೋಳ ವ್ಯಂಗ್ಯ

ABOUT THE AUTHOR

...view details