ಕರ್ನಾಟಕ

karnataka

ETV Bharat / state

ನಮಗೂ ಮೊಟ್ಟೆ ಎಸೆಯಲು ಗೊತ್ತೆಂದ ಸಿದ್ದರಾಮಯ್ಯ ವಿರುದ್ಧ ಪೊಲೀಸರಿಗೆ ದೂರು - ನಮಗೂ ಮೊಟ್ಟೆ ಎಸೆಯಲು ಗೊತ್ತು

ನಮಗೂ ಮೊಟ್ಟೆ ಎಸೆಯಲು ಗೊತ್ತೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಇದು ಪ್ರಚೋದನಾಕಾರಿ ಹೇಳಿಕೆ ಎಂದು ಆರೋಪಿಸಿ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ನಮಗೂ ಮೊಟ್ಟೆ ಎಸೆಯಲು ಗೊತ್ತು ಎಂದ ಸಿದ್ದರಾಮಯ್ಯ
ನಮಗೂ ಮೊಟ್ಟೆ ಎಸೆಯಲು ಗೊತ್ತು ಎಂದ ಸಿದ್ದರಾಮಯ್ಯ

By

Published : Aug 19, 2022, 4:47 PM IST

ಮೈಸೂರು: ನಮಗೂ ಮೊಟ್ಟೆ ಎಸೆಯಲು ಗೊತ್ತು ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಪ್ರಚೋದನಕಾರಿಯಾಗಿದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಕಳೆದ ಬಾರಿ ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ತೋಟದಪ್ಪ ಬಸವರಾಜ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ನಿನ್ನೆ ಮಡಿಕೇರಿಯಲ್ಲಿ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, "ನಮಗೂ ಮೊಟ್ಟೆ ಹೊಡೆಯಲು ಗೊತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೀದಿಯಲ್ಲಿ ಓಡಾಡಲು ಆಗುತ್ತದೆಯೇ" ಎಂದು ಹೇಳಿಕೆ ನೀಡಿದ್ದರು. ಇದು ಪ್ರಚೋದನಕಾರಿ ಹೇಳಿಕೆ. ಮುಖ್ಯಮಂತ್ರಿಗಳಿಗೆ ಬೆದರಿಕೆ ರೂಪದಲ್ಲಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕೊಡಗಿನಲ್ಲಿ ನನ್ನ ವಿರುದ್ಧದ ಪ್ರತಿಭಟನೆಗೆ ಸರ್ಕಾರವೇ ಕುಮ್ಮಕ್ಕು ನೀಡಿದೆ.. ಮತ್ತೆ ಗುಡುಗಿದ ಸಿದ್ದರಾಮಯ್ಯ

ABOUT THE AUTHOR

...view details