ಕರ್ನಾಟಕ

karnataka

ETV Bharat / state

KSOU ಕುಲಪತಿ ಡಾ. ಎಸ್. ವಿದ್ಯಾಶಂಕರ್ ವಿರುದ್ಧ ಎಸಿಬಿಗೆ ದೂರು ದಾಖಲು - ಕರ್ನಾಟಕದ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿಗಳಾಗಿರುವ ಡಾ. ಎಸ್. ವಿದ್ಯಾಶಂಕರ್

ಕರ್ನಾಟಕದ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿಗಳಾಗಿರುವ ಡಾ. ಎಸ್. ವಿದ್ಯಾಶಂಕರ್ ಅವರು ತಾವು ಆಡಳಿತಕ್ಕೆ ಸೇರಿಕೊಂಡಾಗಿನಿಂದ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ..

KSOU Chancellor Dr. S. Vidyashankar
ಡಾ. ಎಸ್. ವಿದ್ಯಾಶಂಕರ್ ವಿರುದ್ಧ ಎಸಿಬಿಗೆ ದೂರು ದಾಖಲು

By

Published : Jan 19, 2022, 5:16 PM IST

ಮೈಸೂರು :ಮೈಸೂರು ಸಾಂಸ್ಕೃತಿಕ ಮತ್ತು ಶೈಕ್ಷಣಿಕ ವೇದಿಕೆಯ ಅಧ್ಯಕ್ಷ ವರುಣಾ ಮಹೇಶ್ ಅವರು KSOU ಕುಲಪತಿ ವಿದ್ಯಾಶಂಕರ್ ಸೇರಿದಂತೆ ಇತರ ಕೆಲವು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದಾರೆ.

ದೂರಿನ ಪ್ರತಿ

ಕರ್ನಾಟಕದ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿಗಳಾಗಿರುವ ಡಾ. ಎಸ್. ವಿದ್ಯಾಶಂಕರ್ ಅವರು ತಾವು ಆಡಳಿತಕ್ಕೆ ಸೇರಿಕೊಂಡಾಗಿನಿಂದ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ.

ಸರ್ಕಾರದ ತಡೆಯಿದ್ದರೂ, ಎಲ್ಲ ನಿಯಮಗಳನ್ನು ಉಲ್ಲಂಘಿಸಿ 200ಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಿದ್ದಾರೆ. ಜೊತೆಗೆ ವಾಹನಗಳನ್ನು ಖರೀದಿಸಿದ್ದಾರೆ. ಅವಶ್ಯಕತೆ ಇಲ್ಲದಿದ್ದರೂ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ನೀರಿನ ಸಂಪ್‌ ಸ್ವಚ್ಛಗೊಳಿಸುವಾಗ ದುರಂತ.. ಬೆಂಗಳೂರಲ್ಲಿ ತಂದೆ-ಮಗ ದಾರುಣ ಸಾವು

ಈ ರೀತಿಯಾಗಿ ಕುಲಪತಿಯವರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿದ್ದಾರೆ. ಅಲ್ಲದೇ ಇವರ ಜೊತೆಗೆ ಕುಲಸಚಿವರು, ಹಣಕಾಸು ಅಧಿಕಾರಿಗಳು ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಇವರ ವಿರುದ್ಧ ವರುಣಾ ಮಹೇಶ್ ದಾಖಲೆ ಸಮೇತ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರನ್ನು ನೀಡಿದ್ದಾರೆ. ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

For All Latest Updates

TAGGED:

ABOUT THE AUTHOR

...view details