ಮೈಸೂರು:ತಮಿಳುನಾಡಿನ ಪೊನ್ಪರಪ್ಪಿ ಗ್ರಾಮಕ್ಕೆ ನುಗ್ಗಿ ದಲಿತರ ಮೇಲೆ ಮಾರಾಕಾಸ್ತ್ರಗಳಿಂದ ಅಮಾನುಷವಾಗಿ ಹಲ್ಲೆ ಮಾಡಿರುವ ಮೇಲ್ವರ್ಗದವರ ನಡೆ ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಪ್ರತಿಭಟನೆ ನಡೆಸಿದೆ.
ತಮಿಳುನಾಡಿನಲ್ಲಿ ಮೇಲ್ವರ್ಗದವರಿಂದ ದಲಿತರ ಮೇಲೆ ಹಲ್ಲೆ: ಮೈಸೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ - undefined
ತಮಿಳುನಾಡಿನ ಪೊನ್ಪರಪ್ಪಿ ಗ್ರಾಮಕ್ಕೆ ನುಗ್ಗಿ ದಲಿತರ ಮೇಲೆ ಮಾರಾಕಾಸ್ತ್ರಗಳಿಂದ ಅಮಾನುಷವಾಗಿ ಹಲ್ಲೆ ಮಾಡಿರುವ ಮೇಲ್ವರ್ಗದವರ ನಡೆ ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಪ್ರತಿಭಟನೆ ನಡೆಸಿದೆ.
ಮಾನಸ ಗಂಗೋತ್ರಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಮಾನಸ ಗಂಗೋತ್ರಿಯ ಗಡಿಯಾರದ ಮುಂಭಾಗ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು ಪೊನ್ಪರಪ್ಪಿ ಗ್ರಾಮದಲ್ಲಿ ದಲಿತರ ಮಕ್ಕಳು, ಮಹಿಳೆಯರು, ವೃದ್ಧರು ಎನ್ನುವುದನ್ನು ನೋಡದೆ ಮನಸೋ ಹಲ್ಲೆ ಮಾಡಲಾಗಿದೆ. ಈ ಘಟನೆಯ ಹಿಂದೆ ಇರುವ ಮೇಲ್ವರ್ಗದ ಜನರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಯಚೂರಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಅರೋಪಿಗಳಿಗೆ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.