ಮೈಸೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯ ರಾಜ್ಯ ಪತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ನಗರದ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಬೆಂಕಿ ಹಚ್ಚುವ ಮೂಲಕ ಪ್ರತಿಭಟಿಸಿದ್ದಾರೆ.
ಭೂ ಸುಧಾರಣಾ ಕಾಯ್ದೆ ರಾಜ್ಯಪತ್ರಕ್ಕೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ - Congress protest on Land reforms act
ರಾಜ್ಯ ಸರ್ಕಾರ ಹೊಡಿಸಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ರಾಜ್ಯಪತ್ರಕ್ಕೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭೂ ಸುಧಾರಣಾ ಕಾಯ್ದೆ ರಾಜ್ಯಪತ್ರಕ್ಕೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಈ ವೇಳೆ, ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ. ರೈತ ವಿರೋಧಿ ಸರ್ಕಾರವೆಂದು ಧಿಕ್ಕಾರ ಕೂಗಿದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ವಕ್ತಾರ ಎಮ್.ಲಕ್ಷ್ಮಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.