ಮೈಸೂರು: ಕಾಂಗ್ರೆಸ್ ನವರು ಭಾರತ್ ಜೋಡೋ ಯಾತ್ರೆ ರಾಜಕೀಯ ಲಾಭಕ್ಕಾಗಿ ಎಂಬ ಭ್ರಮೆಯಲ್ಲಿದ್ದಾರೆ. ಅದಕ್ಕೆ ನಾವು ಬೇಡ ಎನ್ನುವುದು ಯಾಕೆ. ಕಾಂಗ್ರೆಸ್ ನವರು ಆ ಭ್ರಮೆಯಲ್ಲಿ ಇರಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ನವರ ಭಾರತ್ ಜೋಡೋ ಯಾತ್ರೆ ರಾಜಕೀಯ ಲಾಭಕ್ಕಾಗಿ ಎಂಬ ಡಿ.ಕೆ ಹಾಗೂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ ನವರು ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ಇದಕ್ಕೆ ನಾವು ಏನು ಮಾಡಲು ಸಾಧ್ಯ, ಅವರನ್ನು ಭ್ರಮೆಯಲ್ಲಿರಲು ಬಿಟ್ಟುಬಿಡಿ ಎಂದು ಹೇಳಿದರು.
ಕಾಂಗ್ರೆಸ್ನವರು ಭಯ ಮತ್ತು ಭ್ರಮೆಯಲ್ಲಿ ಬದುಕುತ್ತಿದ್ದಾರೆ :ಇಷ್ಟು ದಿನ ಕಾಂಗ್ರೆಸ್ ನವರು ಜನರನ್ನು ಭ್ರಮೆಯಲ್ಲಿಟ್ಟಿದ್ದರು. ಈಗ ಅವರೇ ಭ್ರಮೆಯಲ್ಲಿದ್ದಾರೆ. ಕಾಂಗ್ರೆಸ್ ನವರು ಈಗ ಎಲ್ಲಿದ್ದಾರೆ ಏನು ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತು. ಮುಂದಿನ ಚುನಾವಣೆಯಲ್ಲಿ ಮತ್ತಷ್ಟು ಗೊತ್ತಾಗಲಿದೆ. ಕಾಂಗ್ರೆಸ್ ಎಂದಿಗೂ ದೇಶಕ್ಕಾಗಿ ವಿಚಾರ ಮಾಡಿಲ್ಲ. ನಕಲಿ ಗಾಂಧಿ ಕುಟುಂಬದವರು ಮತ್ತು ಅವರ ಕುಟುಂಬದವರ ಬಗ್ಗೆ ಮಾತ್ರ ಯೋಚನೆ ಮಾಡುತ್ತಾರೆ ಈ ದೇಶದ ಬಗ್ಗೆ ಅವರಿಗೆ ಏನು ಗೊತ್ತಿಲ್ಲ ಎಂದು ಟೀಕಿಸಿದರು.