ಮೈಸೂರು:ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.
ಪುರಭವನದಿಂದ ನಜರ್ಬಾದ್ ತೆರಿಗೆ ಕಚೇರಿವರೆಗೆ ಮೆರವಣಿಗೆ ಹೊರಡಲು ಮುಂದಾದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪ್ರತಿಭಟನಾನಿರತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.