ಮೈಸೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿ ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಲು ಮತ್ತೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭ್ರಷ್ಟಾಚಾರದಲ್ಲಿ ಮುಳುಗಿದೆ. ಜನಸಾಮಾನ್ಯರಿಗೆ ಅನುಕೂಲವಾಗುವ ಯೋಜನೆಗಳನ್ನು ರೂಪಿಸುವ ಬದಲು, ಕಾರ್ಪೊರೇಟ್ ವಲಯಕ್ಕೆ ಅನುಕೂಲವಾಗುವಂತೆ ನಡೆದುಕೊಳ್ಳುತ್ತಿದೆ. ರೈತರ ಹಾಗೂ ಕಾರ್ಮಿಕರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.
ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಹಾಗೂ ಅಪರಾಧ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಇಂತಹ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲು ಕೇಂದ್ರ ಸರ್ಕಾರ ಮುಂದಾಗಬೇಕು. ಆದರೆ, ಮೋದಿ ಅವರು ಸುಳ್ಳು ಹೇಳಿ ದೇಶದ ಜನರ ದಿಕ್ಕು ತಪ್ಪಿಸುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕರಾದ ತನ್ವೀರ್ ಸೇಠ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಮಾಜಿ ಸಂಸದ ಆರ್.ಧ್ರುವನಾರಾಯಣ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.