ಕರ್ನಾಟಕ

karnataka

ETV Bharat / state

ಯಡಿಯೂರಪ್ಪ, ಶಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್​​ ಪ್ರತಿಭಟನೆ - ಮೈಸೂರಿನಲ್ಲಿ ಕಾಂಗ್ರೇಸ್​ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಘಟಕದಿಂದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೇಸ್ ಪ್ರತಿಭಟನೆ

By

Published : Nov 4, 2019, 2:26 PM IST

ಮೈಸೂರು:ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಘಟಕದಿಂದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್​ ಪ್ರತಿಭಟನೆ

ಹುಬ್ಬಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್​ವೈ ಅವರು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ‌‌. ಆಪರೇಷನ್ ಕಮಲ ಮಾಡುವಂತೆ ಅಮಿತ್ ಶಾ ಸೂಚನೆ ಕೊಟ್ಟಿದ್ದಾರೆ. ಅದರಂತೆ ಕೆಲಸ ಮಾಡಲಾಗಿದೆ ಎಂದು ಬಿಎಸ್​​ವೈ ಹೇಳಿದ್ದಾರೆ. ಹಾಗಾಗಿ ಈ ಇಬ್ಬರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ಆಪರೇಷನ್​ ಕಮಲ ಮಾಡಿರುವುದು ಆಡಿಯೋ ಮೂಲಕ ಬಹಿರಂಗವಾಗಿದೆ. ಹಾಗಾಗಿ ನೈತಿಕ ಹೊಣೆ ಹೊತ್ತು ಈ ಇಬ್ಬರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ವಿರುದ್ಧವೂ ಕಿಡಿಕಾರಿದರು.

ABOUT THE AUTHOR

...view details