ಮೈಸೂರು: ದಿನದಿಂದ ದಿನಕ್ಕೆ ಪೆಟ್ರೋಲ್ - ಡೀಸಲ್ ದರ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಜಿಲ್ಲಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತು.
ಇಂಧನ ಬೆಲೆ ಏರಿಕೆ ವಿರೋಧಿಸಿ ಮೈಸೂರಿನಲ್ಲೂ ಕಾಂಗ್ರೆಸ್ ಪ್ರತಿಭಟನೆ - ಮೈಸೂರು ಕಾಂಗ್ರೆಸ್ ಪ್ರತಿಭಟನೆ ಸುದ್ದಿ
ರೈಲ್ವೆ ನಿಲ್ದಾಣದ ಬಳಿ ಇರುವ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ತಳ್ಳುವಗಾಡಿಯ ಮೇಲೇರಿ ಹೊರಟ ಕಾಂಗ್ರೆಸ್ ಮುಖಂಡರು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ರೈಲ್ವೆ ನಿಲ್ದಾಣದ ಬಳಿ ಇರುವ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ತಳ್ಳುವಗಾಡಿಯ ಮೇಲೇರಿ ಹೊರಟ ಕಾಂಗ್ರೆಸ್ ಮುಖಂಡರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜೂನ್ 7 ರಿಂದ ನಿರಂತರವಾಗಿ ಪೆಟ್ರೋಲ್ ಡೀಸಲ್ ದರ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರ, ಜನಸಾಮಾನ್ಯರಿಂದ ಸುಲಿಗೆ ಮಾಡುತ್ತಿದೆ. ಕೊರೊನಾ ಹಾವಳಿಯಿಂದ ದೇಶಾದ್ಯಂತ ಜನರು ತತ್ತರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಲೆ ಏರಿಕೆ ಜನರಿಗೆ ಮತ್ತಷ್ಟು ಹೊರೆಯಾಗಿದೆ ಎಂದು ದೂರಿದರು.