ಮೈಸೂರು:ವೃದ್ಧನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಚ್ಚಿದ್ದಾರೆ.
ಮೈಸೂರು: ಕಿತ್ತೂರು ಗ್ರಾಮದಲ್ಲಿ ಕೊರೊನಾ ಪತ್ತೆ ಹಿನ್ನೆಲೆ ಅಂಗಡಿಗಳು ಬಂದ್ - ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಗ್ರಾಮ
ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಚ್ಚಿದ್ದಾರೆ.
ಗ್ರಾಮದ ಪೆಟ್ರೋಲ್ ಬಂಕ್, ಆಸ್ಪತ್ರೆ, ಮೆಡಿಕಲ್, ಕ್ಷೀರ ಕೇಂದ್ರಗಳು, ಬ್ಯಾಂಕ್‍ಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ವರ್ತಕರು, ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಿದ್ದರು. ಕಿತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಂಪೇಗೌಡನ ಕೊಪ್ಪಲು ಗ್ರಾಮದಲ್ಲಿ ಸುಮಾರು 62 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿರುವುದರಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.
ಅಧಿಕಾರಿಗಳು ಕೆಂಪೇಗೌಡ ಕೊಪ್ಪಲು ಗ್ರಾಮಕ್ಕೆ ತೆರಳಿ ಸೋಂಕಿತರ ಮನೆಯ ಸುತ್ತಮುತ್ತ ಹಾಗೂ ಗ್ರಾಮದಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಿ ಯಾರೂ ಹೆದರದಂತೆ ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.