ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಹರಡುವಿಕೆ ಹೆಚ್ಚುತ್ತಲೇ ಇದ್ದು, ಕೇವಲ 10 ದಿನಗಳಲ್ಲಿ ಮೂರು ಜನ ಮೃತಪಟ್ಟಿದ್ದಾರೆ.
ಕೊರೊನಾ ರಣಕೇಕೆ: ಮೈಸೂರಲ್ಲಿ ಮಹಾಮಾರಿ ಸೋಂಕಿಗೆ ಮತ್ತೊಂದು ಬಲಿ..! - mysore corona case
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ವೈರಸ್ ತನ್ನ ಆರ್ಭಟವನ್ನು ಹೆಚ್ಚಿಸುತ್ತಿದೆ. ವಿಧಾನಸೌಧದ ಆರ್‌ಡಿಪಿಆರ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಆರ್. ನಗರ ತಾಲೂಕಿನ ನಿವಾಸಿಯೊಬ್ಬರನ್ನು ಮಹಾಮಾರಿ ಬಲಿ ಪಡೆದಿದೆ.
ಸಾಂಸ್ಕೃತಿಕ ನಗರಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ
ವಿಧಾನಸೌಧದ ಆರ್‌ಡಿಪಿಆರ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಆರ್. ನಗರ ತಾಲೂಕಿನ ನಿವಾಸಿ (36 ವರ್ಷ) ಕೊರೊನಾಗೆ ಬಲಿಯಾಗಿದ್ದಾರೆ.
ಮೂರು ದಿನಗಳ ಹಿಂದೆ ಗ್ರಾಮಕ್ಕೆ ಹಿಂದಿರುಗಿದ್ದ ಇವರಲ್ಲಿ ಸೋಂಕು ಪತ್ತೆಯಾದ ಕಾರಣ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೀಗಾಗಿ ಅಧಿಕಾರಿಗಳು ಮೃತನ ಟ್ರಾವೆಲ್ ಹಿಸ್ಟರಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.