ಕರ್ನಾಟಕ

karnataka

ETV Bharat / state

ಕೊರೊನಾ ಹೊಡೆತ.. ಮೈಸೂರು ವಿವಿಯಲ್ಲಿ ತಗ್ಗಿದ ವಿದೇಶಿ ವಿದ್ಯಾರ್ಥಿಗಳ ದಾಖಲಾತಿ - ಮೈಸೂರು ವಿದೇಶಿ ವಿದ್ಯಾರ್ಥಿಗಳ ಸುದ್ದಿ

ಜನವರಿ 6ರಂದು ಮೈಸೂರು ವಿವಿ ಮತ್ತು ಪ್ರಾಚ್ಯವಿದ್ಯಾ ಸಂಶೋಧನಾಲಯದಿಂದ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮತ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಇದರ ಉಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು..

ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್
ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್

By

Published : Jan 4, 2021, 1:48 PM IST

ಮೈಸೂರು :ಕೊರೊನಾ ಹಿನ್ನೆಲೆ ಮೈಸೂರು ವಿವಿಗೆ ದಾಖಲಾಗುವ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ ಹೇಮಂತ್ ಕುಮಾರ್ ತಿಳಿಸಿದ್ದಾರೆ.

ಇಂದು ಮೈಸೂರು ವಿವಿಯ ಕ್ರಾಫರ್ಡ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ವಿವಿಯಲ್ಲಿ ಈಗ 3ನೇ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳು ನಡೆಯುತ್ತಿವೆ.

ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್

ಸರ್ಕಾರ ಎಸ್ಎಸ್ಎಲ್​ಸಿ ಹಾಗೂ ಪಿಯುಸಿ ತರಗತಿಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದರಂತೆ ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ ತರಗತಿಗಳನ್ನು ನಡೆಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

ಜನವರಿ 6ರಂದು ಮೈಸೂರು ವಿವಿ ಮತ್ತು ಪ್ರಾಚ್ಯವಿದ್ಯಾ ಸಂಶೋಧನಾಲಯದಿಂದ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮತ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಇದರ ಉಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು. ಇನ್ನು, 6 ಗ್ರಾಪಂ ವ್ಯಾಪ್ತಿಯ ಗ್ರಾಮಗಳು ಮತ್ತು 10 ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಲಾಗಿದೆ ಎಂದರು.

ABOUT THE AUTHOR

...view details